Tuesday, February 3, 2026

ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದ ಶಾಸಕ ರಾಜೇಶ್ ನಾಯ್ಕ್. ಬಂಟ್ವಾಳದ ಪ್ರತಿಯೊಬ್ಬ ಪ್ರಜೆಯೂ ಕೋವಿಡ್ ಲಸಿಕೆ ಪಡೆದುಕೊಳ್ಳಿ ಎಂದು ಮನವಿ

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡರು.

ಲಸಿಕೆ ಪಡೆದ ಬಳಿಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಶಾಸಕರು, ತಾನು ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಂಡಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ಖಾಯಿಲೆಯಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟಂತಹ ಬಂಟ್ವಾಳದ ಜನತೆಯಲ್ಲಿ ಕೋವಿಡ್ ಲಸಿಕೆ ಪಡೆಯುವಂತೆ ಮನವಿ ಮಾಡುತ್ತಿದ್ದೇನೆ. ಇದರಿಂದ ತಮಗೆ ಹಾಗೂ ಸಮಾಜಕ್ಕೆ ಒಳತಾಗುತ್ತದೆ. ಕೊರೊನಾದ 2ನೇ ಅಲೆಯ ಕುರಿತು ಜನತೆ ಆತಂಕದಲ್ಲಿದ್ದು, ಹೀಗಾಗಿ ತಮ್ಮ ಹಾಗೂ ಇತರರ ರಕ್ಷಣೆಯ ದೃಷ್ಟಿಯಿಂದ ಲಸಿಕೆ ಪಡೆಯುವುದು ಅಗತ್ಯವಾಗಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ವಿತರಣೆಯಾಗುತ್ತಿದ್ದು, ಜನತೆ ಇದರ ಪ್ರಯೋಜನ ಪಡೆಯಬೇಕಿದೆ ಎಂದರು.

ಶಾಸಕರ ಜೊತೆ ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಅವರು ಕೂಡ ಲಸಿಕೆ ಪಡೆದುಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳು ಜತೆಗಿದ್ದರು..

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...