Thursday, June 26, 2025

ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ 2020-21 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ

ಬಂಟ್ವಾಳ: ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ 2020 -21 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ವೀರಕಂಭ ಶ್ರೀ ಶಾರದಾ ಮಂದಿರದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ವೀರಪ್ಪ ಮೂಲ್ಯ ಬೆತ್ತಸರವು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದ ಮೊದಲು ನಿಧನರಾದ ಸಂಘದ ನಿಕಟಪೂರ್ವ ಅಧ್ಯಕ್ಷರಾದ  ದಿಲೀಪ್ ಕುಮಾರ್ ಇವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಸದಸ್ಯರಿಗೆ 22 ಶೇಕಡಾ ಡಿವಿಡೆಂಟ್  ಹಾಗೂ ಸಂಘದಲ್ಲಿ ದೊರೆಯುವ ಲವಣ ಮಿಶ್ರಣಕ್ಕೆ ಹತ್ತು ರೂಪಾಯಿ ರಿಯಾಯಿತಿ ಸಂಘದ ವತಿಯಿಂದ ನೀಡುವುದಾಗಿ ಸಂಘದ ಅಧ್ಯಕ್ಷರು ತಿಳಿಸಿದರು. ಹಾಗೂ ಸಂಘಕ್ಕೆ ಹಾಲು ಪೂರೈಸುತ್ತಿರುವ ಸದಸ್ಯರಿಗೆ ಪ್ರೋತ್ಸಾಹದಾಯಕವಾಗಿ ಉಚಿತವಾಗಿ ಫೈಬರ್ ಬಕೆಟ್ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೆಎಂಎಫ್ ವಿಸ್ತರಣಾಧಿಕಾರಿ  ದೇವರಾಜ್ ಹಾಲಿನ ಗುಣಮಟ್ಟ ಹಾಗೂ ಪಶು ಸಾಕಣೆ ಬಗ್ಗೆ  ರೈತರಿಗೆ ಕೆ ಎಂ ಎಫ್ ಹಾಗೂ ಸರಕಾರದಿಂದ  ಹೈನುಗಾರಿಕೆಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿವೇತನ ಹಾಗೂ ಸಂಘದ ಕಟ್ಟಡಕ್ಕೆ ಮೇಲ್ಚಾವಣಿ ಮಾಡಿ ಸಭಾ ಕೊಠಡಿ ಮಾಡಲು ಸದಸ್ಯರ ಒಪ್ಪಿಗೆ ಪಡೆಯಲಾಯಿತು.

ಸಂಘದ ವರದಿಯನ್ನು ಕಾರ್ಯದರ್ಶಿ ಹರೀಶ್ ಬಂಗೇರ ವಾಚಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ  ತೇಜಾಕ್ಷಿ, ನಿರ್ದೇಶಕರುಗಳಾದ ಪದ್ಮನಾಭ ಬಂಗೇರ ಮಜಿ, ಜಯಶೀಲ ಆಳೃ, ಉಮೇಶ ಮಜಿ, ಪದ್ಮನಾಭ ಗೌಡ ಮೈರ, ಆನಂದ ಮೂಲ್ಯ ಮೈರ ಉಮಾವತಿ ಮಜಿ ಉಪಸ್ಥಿತರಿದ್ದರು.

More from the blog

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...