Wednesday, July 9, 2025

ವೀರಕಂಬ: ಮುಕ್ತ ಕಬಡ್ಡಿ ಪಂದ್ಯಾಟ

ಬಂಟ್ವಾಳ: ವೀರಕಂಬ ಯುವ ಶಕ್ತಿ ಫ್ರೆಂಡ್ಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಕಾರದೊಂದಿಗೆ ತೃತೀಯ ವರ್ಷದ ಹಿಂದೂ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ ವೀರಕಂಭ ಗ್ರಾಮ ಪಂಚಾಯತ್ ಬಳಿ ನಡೆಯಿತು.  ವೀರಕಂಬ ಗ್ರಾ.ಪಂ. ಸದಸ್ಯ ರಾಮಚಂದ್ರ ಪ್ರಭು ನಂದನತಿಮಾರು ಕಾರ್ಯಕ್ರಮ ಉದ್ಘಾಟಿಸಿದರು. ಮಾಣಿ ಕ್ಷೇತ್ರದ ಜಿ.ಪಂ. ಸದಸ್ಯೆ ಮಂಜುಳಾ ಮಾಧವ ಮಾವೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿ, ಯುವಶಕ್ತಿ ಫ್ರೆಂಡ್ಸ್ ಸಂಘಟನೆಯ ಸದಸ್ಯರು ಕ್ರೀಡಾಕೂಟದ ಜೊತೆಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಿ ವೀರಕಂಭ ಗ್ರಾಮದ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರಬೇಕು ಎಂದು ಹೇಳಿ, ಸಂಘಟನೆಗೆ ತನ್ನ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ತಾ.ಪಂ. ಸದಸ್ಯೆ ಗೀತ ಚಂದ್ರಶೇಖರ್, ಬಜರಂಗದಳ ಕಲ್ಲಡ್ಕ ವಲಯದ ಮಿಥುನ್ ಪೂಜಾರಿ ಹೊಸಮನೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೀರಕಂಬ ಒಕ್ಕೂಟದ ಅಧ್ಯಕ್ಷ ಕೊರಗಪ್ಪ ನಾಯ್ಕ ಸಿಂಗೇರಿ, ಕಲ್ಲಡ್ಕ ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಕೇಪುಳ ಕೊಡಿ, ವೀರಕಂಭ ಗ್ರಾ.ಪಂ. ಸದಸ್ಯರಾದ ಜಯಂತಿ ಜನಾರ್ಧನ್ ಅಂಕ ಧಡ್ಕ, ಪದ್ಮಾವತಿ ಗಣೇಶ್ ಕೋಡಿ, ಜಯಂತಿ ನಂದನತಿಮಾರು,  ನಿಶಾಂತ್ ರೈ, ಜನಾರ್ಧನ ಪೂಜಾರಿ ಗೊಳಿಮಾರ್, ಕ್ರೀಡಾಂಗಣ ಸ್ಥಳದ ಮಾಲಕ ಕೃಷ್ಣಪ್ಪ ಪೂಜಾರಿ ಗಾಣದಮೂಲೆ, ಪ್ರಗತಿಪರ ಕೃಷಿಕರಾದ ಜಗನ್ನಾಥ್ ಆಲ್ವಾ ಮೈರ, ಮನೀಶ್ ಅಲ್ವಾ ವೀರಕಂಬ, ಯುವಶಕ್ತಿ ಫ್ರೆಂಡ್ಸ್ ಇದರ ಅಧ್ಯಕ್ಷ ಜಗದೀಶ್ ವೀರಕಂಭ ಉಪಸ್ಥಿತರಿದ್ದರು.
ಪಂದ್ಯಾಟದ ಪ್ರಥಮ ಬಹುಮಾನ ವ್ಯೆದ್ಯನಾಥ ವಾರಿಯರ್ಸ್ ಗುರುಪುರ, ದ್ವಿತೀಯ ಬಹುಮಾನ ಟಾಸ್ಕ್ ಬಸವನಗುಡಿ, ತೃತೀಯ ಬಹುಮಾನ ಆದರ್ಶ ಫ್ರೆಂಡ್ಸ್ ಹೋಸ್ ಮಠ ಹಾಗೂ ಚತುರ್ಥ ಬಹುಮಾನವನ್ನು ಷಣ್ಮುಖ ಕೋಲ್ಪೆ ತಂಡಗಳು ಕ್ರಮವಾಗಿ ಪಡೆದುಕೊಂಡವು.

More from the blog

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...