Wednesday, January 28, 2026

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ವೀರಕಂಭ ಗ್ರಾಮದ ತೆಕ್ಕಿಪಾಪು ನಳಿನಿ ಮೋನಪ್ಪ ಪೂಜಾರಿರವರ ಮನೆ ವಠಾರದಲ್ಲಿ ಬುಧವಾರ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ ಗೋಳಿಮಾರ್ ವಹಿಸಿದ್ದರು.

ಕಾರ್ಯಕ್ರಮವನ್ನು ಕೃಷಿಕರಾದ ಜಯಪ್ರಕಾಶ್ ತೆಕ್ಕಿಪಾಪು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಾಗಿ ಬಂಟ್ವಾಳ ತಾಲೂಕು ತೋಟಗಾರಿಕಾ ನಿರ್ದೇಶಕ ದಿನೇಶ್, ತಾಲೂಕು, ಕೃಷಿ ಅಧಿಕಾರಿ ನಂದನ್ ಶೆಣೈ, ತಾಂತ್ರಿಕ ವ್ಯವಸ್ಥಾಪಕ ಆತ್ಮ ಯೋಜನೆ ಬಿ ಸಿರೋಡ್ ನ ಹನುಮಂತ ಕಾಳಗಿ, ರೈತರಿಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರೆಹಮಾನ್,ಪ್ರಗತಿಪರ ಕೃಷಿಕ ಮಜಿ ತಿರುಮಲೇಶ್ವರ ಕುಮಾರ್,, ನಿವೃತ್ತ ಸೈನಿಕ ಚಂದ್ರಶೇಖರ್, ಉಪಸ್ಥಿತರಿದ್ದರು.

ಕುಸುಮ ಶೆಟ್ಟಿ ಹಾಗೂ ಪ್ರೇಮಾ ಆಚಾರ್ಯ ಪ್ರಾರ್ಥಿಸಿ, ವೀರಕಂಬ ಗ್ರಾಮಪಶು ಸಖಿ ಪ್ರಚೀನ ಸ್ವಾಗತಿಸಿ,, ಸ್ನೇಹ ಸಂಜೀವಿನಿ ಒಕ್ಕೂಟದ ಮುಖ್ಯ ಬರಹಗಾರ ಮಲ್ಲಿಕಾ ಶೆಟ್ಟಿ, ವಂದಿಸಿದರು. ಕೃಷಿ ಸಾವಯವ ಗೊಬ್ಬರ ಸಿ ಆರ್ ಪಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು.

ಕೃಷಿ ಸಖಿಗಳಾದ ನಮಿತಾ, ಗಾಯತ್ರಿ ಅಳಿಕೆ, ಸವಿತ ಡಿಸೋಜ ತಾಂತ್ರಿಕ ವ್ಯವಸ್ಥಾಪಕರು ಆತ್ಮ ಯೋಜನೆ ವಿಟ್ಲದ ವಿರೂಪಾಕ್ಷ ಸಹಕರಿಸಿದರು.

More from the blog

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...