Tuesday, January 27, 2026

ಮಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿ: ವಿಶ್ವ ಹಿಂದೂ ಪರಿಷತ್ ಖಂಡನೆ : ಶರಣ್ ಪಂಪ್ವೆಲ್

ಮಂಗಳೂರು: ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಯು ಒಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ನಮ್ಮ ದೇಶದ ಪ್ರಧಾನ ಮಂತ್ರಿಗಳೇ ಖುದ್ದು ಭಾಗವಹಿಸುತ್ತಿದ್ದಾರೆ.

ರಾಷ್ಟ್ರೀಯ ಕಾರ್ಯಕ್ರಮ ನಡೆಯುವ ಆ ದಿನವನ್ನು ಸಂಭ್ರಮಿಸಲು ಇಡೀ ದೇಶದ ಜನ ಸಿದ್ಧತೆ ನಡೆಸಿದ್ದು, ಮಂಗಳೂರು ನಗರದಲ್ಲಿಯೂ ದೇವಸ್ಥಾನ, ಮಂದಿರಗಳಲ್ಲಿ ಪೂಜೆ ಪುರಸ್ಕಾರ ಮತ್ತು ಭಜನೆ ಹಾಗೂ ತಮ್ಮ ತಮ್ಮ ಮನೆಗಳಲ್ಲಿ ದೀಪ ಬೆಳಗಿಸುವ ಮುಖಾಂತರ ಆಚರಿಸಲು ಮಂಗಳೂರಿನ ಜನತೆ ಸಿದ್ಧತೆ ನಡೆಸಿರುತ್ತಾರೆ.

ಇಂತಹ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಏಕಾಏಕಿ ಮಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದು, ಜನರಲ್ಲಿ ನೋವು ಮತ್ತು ಆತಂಕವನ್ನು ಮೂಡಿಸಿದೆ. ಜಿಲ್ಲಾಡಳಿತದ ಈ ಕ್ರಮವನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಹಾಗೂ ಸೆಕ್ಷನ್ 144 ಅನ್ನು ಈ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸುತ್ತದೆ ಎಂದು ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...