Saturday, January 31, 2026

ಸ್ಥೂಲಕಾಯದಿಂದ ಬರುವ ಹೃದಯ ಸಂಬಂಧಿ ಹಾಗೂ ಮಧುಮೇಹ ರೋಗಗಳಲ್ಲಿ ಜೀವನ ಶೈಲಿಯ ಪಾತ್ರಃ ರಾಷ್ಟ್ರೀಯ ವಿಚಾರ ಸಂಕಿರಣ ಇಂದಿನಿಂದ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 1989 ರಲ್ಲಿ ದೇಶದಲ್ಲಿಯೇ ಪ್ರಥಮವಾಗಿ ಉಜಿರೆಯಲ್ಲಿ ಪ್ರಾರಂಭಗೊಂಡ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಇಂದಿನಿಂದ (ಶುಕ್ರವಾರ) ಎರಡು ದಿನ ಸ್ಥೂಲಕಾಯದಿಂದ ಬರುವ ಹೃದಯ ಸಂಬಂಧಿ ಹಾಗೂ ಮಧುಮೇಹ ರೋಗಗಳಲ್ಲಿ ಜೀವನ ಶೈಲಿಯ ಪಾತ್ರ ಎಂಬ ವಿಷಯದಲ್ಲಿ ಎರಡನೇ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಕಾಲೇಜಿಗೆ ಉತ್ಕೃಷ್ಟತಾ ಕೇಂದ್ರವಾಗಿ ಮಾನ್ಯತೆ ನೀಡಿದ್ದು ಪ್ರತಿ ವರ್ಷ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿ ಸಂಶೋಧಕರು ಹಾಗೂ ತಜ್ಞರಿಂದ ಪ್ರಬಂಧಗಳನ್ನು ಮಂಡಿಸಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಬಗ್ಗೆ ಜನರಲ್ಲಿ ಅರಿವು, ಜಾಗೃತಿ ಮೂಡಿಸಲಾಗುತ್ತದೆ.
ಸಂಶೋಧನೆಯ ಮೂಲಕ ಪ್ರಚಾರ ಮಾಡಿದಾಗ ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಗೆ ಜನರಿಗೆ ಅದರ, ವಿಶ್ವಾಸ ಮೂಡಿ ಬರುತ್ತದೆ ಎಂಬ ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಇಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ಕೊಡಲಾಗುತ್ತದೆ.
ದೇಶ-ವಿದೇಶಗಳಿಂದ 32 ವಿಶ್ವವಿದ್ಯಾಲಯಗಳಿಂದ ಒಂದು ಸಾವಿರಕ್ಕೂ ಮಿಕ್ಕಿ ಪ್ರತಿನಿಧಿಗಳು ಭಾಗವಹಿಸಲಿದ್ದು ಸಿದ್ಧತೆಗಳು ಪೂರ್ಣಗೊಂಡಿವೆ.
ಕಾಲೇಜು ಕಟ್ಟಡ ಹಾಗೂ ಪರಿಸರವನ್ನು ಆಕರ್ಷಕ ವಿನ್ಯಾಸದಿಂದ ಸಿಂಗರಿಸಿದ್ದು ಕಣ್ಮನ ಸೆಳೆಯುತ್ತಿದೆ. ಶುಕ್ರವಾರ ಬೆಳಿಗ್ಗೆ ಹತ್ತು ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ವಿಚಾರ ಸಂಕಿರಣವನ್ನು ಉದ್ಘಾಟಿಸುವರು. ಧರ್ಮಸ್ಥಳದ ಧಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.

More from the blog

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...