ಬಂಟ್ವಾಳ:
ಉತ್ತರಪ್ರದೇಶದ ಪ್ರಯಾಗದಲ್ಲಿ ಇತ್ತೀಚೆಗೆ ಜರಗಿದ ಯಶಸ್ವಿ ಕುಂಭಮೇಳದ ಉಸ್ತುವಾರಿ ವಹಿಸಿದ್ದ ಬಂಟ್ವಾಳ ಮೂಲದ ಐಎಎಸ್ ಅಧಿಕಾರಿ ವಿಜಯ್ ಕಿರಣ್ ಆನಂದ್ ಈ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಪಡೆದು ಬಳಿಕ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವಿರೇಂದ್ರ ಹೆಗ್ಗಡೆಯವರನ್ನು ಬೇಟಿಯಾದರು.

ಕುಂಭಮೇಳದ ವ್ಯವಸ್ಥೆಯ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ
ಕುಂಭಮೇಳದ ಯಶಸ್ಸಿನ ಬಗ್ಗೆ ಪೂಜ್ಯ ಖಾವಂದರು ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳದ ಉದಯಕುಮಾರ್ ದಂಪತಿ ಹಾಗೂ ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು.