ವಿಟ್ಲ: ವಿಟ್ಲ ಕ್ಷೇತ್ರ ಬಾಲಗೋಕುಲ ಸಮಿತಿ ಇದರ ಪಾದಮಂಡಲೋತ್ಸವ ಪ್ರಯುಕ್ತ ಡಿಸೆಂಬರ್ ೨೯ರಂದು ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಸಿದ್ಧಿಗಣಪತಿ ಸಹಿತ ವಿದ್ಯಾ ಸರಸ್ವತಿ ಮಹಾಯಾಗದ ಸಮಿತಿಯನ್ನು ರಚಿಸಲಾಗಿದೆ.
ಸಮಿತಿಯ ಗೌರವಾಧ್ಯಕ್ಷರಾಗಿ ಸದಾಶಿವ ಆಚಾರ್ಯ, ಅಧ್ಯಕ್ಷರಾಗಿ ರಾಘವೇಂದ್ರ ಪೈ, ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಧರ್ಮನಗರ, ಕೋಶಾಧಿಕಾರಿಯಾಗಿ ಹರೀಶ್ ಸಿ.ಎಚ್ ಹಾಗೂ ೧೦೨ ಸದಸ್ಯರ ಸಮಿತಿ ರಚನೆ ಮಾಡಲಾಗಿದೆ ಎಂದು ವಿಟ್ಲ ಕ್ಷೇತ್ರ ಬಾಲಗೋಕುಲ ಸಮಿತಿಯ ಗೌರವ ಕಾರ್ಯದರ್ಶಿ ಪದ್ಮನಾಭ ಕಟ್ಟೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


