Wednesday, January 28, 2026

ಯುನೈಟೆಡ್ ಎಂಪವರ್‌ಮೆಂಟ್‌ನ ಜಿಲ್ಲಾಧ್ಯಕ್ಷರಾಗಿ ಶಫೀಕ್ ಎಂ.ಎಸ್

ವಿಟ್ಲ: ರಾಜ್ಯ ಮಟ್ಟದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್‌ನ ವಿಟ್ಲ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಶಫೀಕ್ ಎಂ.ಎಸ್ ಪುಣಚ ಅವರು ಆಯ್ಕೆಯಾಗಿದ್ದಾರೆ.
ವಿಟ್ಲದ ನೀರಕಣಿಯ ಜೆಎಲ್ ಅಡಿಟೋರಿಯಂನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು ಈ ಆಯ್ಕೆ ಪ್ರಕ್ರಿಯೆ ನಡೆಸಿದರು.
ಉಪಾಧ್ಯಕ್ಷರಾಗಿ ರಿಯಾಝ್ ವಿ.ಎಚ್, ದಾವೂದು ಒಕ್ಕೆತ್ತೂರು, ಇಕ್ಬಾಲ್ ಶೀತಲ್, ಮಜೀದ್ ಕನ್ಯಾನ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷದ್ ಇಸ್ಮಾಯಿಲ್ ಚಂದಳಿಕೆ, ಜತೆ ಕಾರ್ಯದರ್ಶಿಯಾಗಿ ಇಝಾದ್ ಒಕ್ಕೆತ್ತೂರು, ರಫೀಕ್ ಪೊನ್ನೋಟ್ಟು, ಖಜಾಂಜಿಯಾಗಿ ಕೌಸರ್, ಕ್ರೀಡಾ ಕಾರ್ಯದರ್ಶಿಯಾಗಿ ನಝೀರ್ ಪುಣಚ, ಕ್ರೀಡಾಕೂಟ ಕಾರ್ಯದರ್ಶಿಯಾಗಿ ಇಮ್ತಿಯಾಝ್ ಬೊಬ್ಬೆಕೇರಿ, ಅಝರ್ ಒಕ್ಕೆತ್ತೂರು, ಮಾಧ್ಯಮ ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ ವಿಟ್ಲ ಅವರನ್ನು ಆಯ್ಕೆ ಮಾಡಲಾಯಿತು.
ಕ್ರಿಕೆಟ್ ಉಸ್ತುವಾರಿಯಾಗಿ ಬಶೀರ್, ಸಿರಾಜ್ ಕಡಂಬು, ಫುಟ್‌ಬಾಲ್ ಉಸ್ತುವಾರಿಯಾಗಿ ನಾಸೀರ್ ವಿಟ್ಲ, ಕಬಡ್ಡಿ ಉಸ್ತುವಾರಿಯಾಗಿ ಸುಲೈಮಾನ್ ಒಕ್ಕೆತ್ತೂರು, ವಾಲಿಬಾಲ್ ಉಸ್ತುವಾರಿಯಾಗಿ ರಾಝಿಕ್ ಒಕ್ಕೆತ್ತೂರು, ಇತರ ಕ್ರೀಡಾ ಉಸ್ತುವಾರಿಯಾಗಿ ರಶೀದ್ ಎಂ.ಎಸ್, ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ರಾಜ್ಯಾಧ್ಯಕ್ಷ ಸಿರಾಜುದ್ದೀನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್, ರಾಜ್ಯ ಸಮಿತಿ ಸದಸ್ಯರಾದ ಇಬ್ರಾಹಿಂ ಗೋಳಿಕಟ್ಟೆ, ಇಕ್ಬಾಲ್ ಹಸನ್, ಸಿರಾಜ್ ಪುತ್ತೂರು, ಶರೀಫ್ ಸಾಲ್ಮರ, ಫಾರೂಕ್ ಪುತ್ತೂರು ಭಾಗವಹಿಸಿದ್ದರು.
ಸದಸ್ಯರಾದ ಶಾಕೀರ್ ಸ್ವಾಗತಿಸಿದರು. ಉಬೈದ್ ವಿಟ್ಲ ಬಜಾರ್ ವಂದಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...