Friday, February 6, 2026

ವಿಟ್ಲಪಡ್ನೂರು ವ್ಯ. ಸೇ.ಸ.ಸಂಘದ ಅಧ್ಯಕ್ಷರಾಗಿ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಅವಿರೋಧ ಆಯ್ಕೆ

ವಿಟ್ಲ: ವಿಟ್ಲ ಪಡ್ನೂರು ವ್ಯವಸಾಯ ಸಂಘದ ಅಧ್ಯಕ್ಷರಾಗಿ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಇವರು ಸತತ 3ನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಕಳೆದ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುತ್ತಾರೆ. ಪ್ರಸ್ತುತ ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಅವರು ಹಲವು ಸಂಘ ಸಂಸ್ಥೆಗಳ ಪದಾಧಿಕರಿಯಾಗಿ ಜನಾನುರಾಗಿಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಬಾಲಕೃಷ್ಣ ರೈ ಮೂರ್ಜೆಬೆಟ್ಟು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅವಧಿಯಲ್ಲಿ ಇವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...