Wednesday, January 28, 2026

ವಿಟ್ಲ: ದನ-ಕರು ಕಳ್ಳತನ

ವಿಟ್ಲ: ಮೂರು ದಿನಗಳ ಹಿಂದೆ ಖರೀದಿಸಿ ತಂದ ದನ ಕರುವನ್ನು ಕಳ್ಳತನ ಮಾಡಿದ ಘಟನೆ ಕೊಳ್ನಾಡು ಸೆರ್ಕಳದಲ್ಲಿ ನಡೆದಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಧನಂಜಯ ಕುಮಾರ್ ಎಸ್.(27) ಎಂಬವರಿಗೆ ಸೇರಿದ ದನ ಕಳವಾಗಿದೆ. ಅಡ್ಯನಡ್ಕ ಕೂಟೇಲು ಎಂಬಲ್ಲಿಂದ 3 ದಿನದ ಹಿಂದೆ ಒಂದು ಕಪ್ಪು ಬಣ್ಣದ ಹಸು ಹಾಗೂ ಒಂದು ಕರುವನ್ನು ಸಾಕಲು ತಂದಿದ್ದು, ಎಂದಿನಂತೆ ಗುರುವಾರ ರಾತ್ರಿ ಕಟ್ಟಿ ಹಾಕಿದ್ದು, ಶುಕ್ರವಾರ ಮನೆಯ ಎದುರು ಕಟ್ಟಿ ಹಾಕಿದ್ದ ಹಸು, ಕರು ಕಾಣೆಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

 

More from the blog

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...