Thursday, February 13, 2025

ಮೃತಪಟ್ಟ ಮಹಿಳೆಯ ಹೆಸರಿನಲ್ಲಿ ಆಸ್ತಿ ದಾಖಲೆ ಸೃಷ್ಟಿಸಿ 30 ಲಕ್ಷ ಸಹಕಾರಿ ಬ್ಯಾಂಕಿಗೆ ವಂಚನೆ: ಆರೋಪಿ ಬಂಧನ

ವಿಟ್ಲ: ಮೃತಪಟ್ಟ ಮಹಿಳೆಯೊಬ್ಬರ ಹೆಸರಿನಲ್ಲಿ ನಕಲಿ ಆಸ್ತಿ ದಾಖಲೆ ಸೃಷ್ಟಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿಯೊಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕ ನಿವಾಸಿ ಡಿ.ಕೆ ಅಬ್ಬಾಸ್ ಬಂಧಿತ ಆರೋಪಿ. ಈತನ ದೂರದ ಸಂಬಂಧಿ ಬೀಪಾತುಮ್ಮ ಎಂಬವರು 2007ರಲ್ಲಿ ನಿಧನರಾಗಿದ್ದರು. ಅವರ ಹೆಸರಿನಲ್ಲಿ ಅಳಿಕೆ ಗ್ರಾಮದಲ್ಲಿ ಜಾಗ ಇದೆ. ಆರೋಪಿ ಅಬ್ಬಾಸ್ 2013ರಲ್ಲಿ ಬೀಪಾತುಮ್ಮ ಅವರ ಹೆಸರಿನಲ್ಲಿ ಜನರಲ್ ಫವರ್ ಆಫ್ ಅಟನರ್ಿ(ಜಿ.ಪಿ.ಎ) ಪಡೆದು ನಕಲಿ ದಾಖಲೆ ಸೃಷ್ಟಿಸಿ ವಿಟ್ಲದ ಖಾಸಗಿ ಬ್ಯಾಂಕ್ನಿಂದ 30 ಲಕ್ಷ ರೂ. ಸಾಲ ಪಡೆದುಕೊಂಡಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬೀಪಾತುಮ್ಮ ಅವರ ಪುತ್ರಿ ನೆಬಿಸಾ ಎಂಬವರು ಡಿ.ಕೆ ಅಬ್ಬಾಸ್ ಹಾಗೂ ಬ್ಯಾಂಕ್ ಶಾಖಾ ಪ್ರಬಂಧಕ ಸೇರಿದಂತೆ ಇತರರ ವಿರುದ್ಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಈ ಬಗ್ಗೆ ನ್ಯಾಯಾಲಯ ಅಬ್ಬಾಸ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಿತ್ತು. ಬಂಟ್ವಾಳ ವೃತ್ತ ನಿರೀಕ್ಷಕ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವಿಟ್ಲ ಎಸ್ಐ ಯಲ್ಲಪ್ಪ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...