Thursday, June 26, 2025

ವಿಟ್ಲ: ಯಕ್ಷ ಸಿಂಧೂರ ಪ್ರಶಸ್ತಿ ಪ್ರದಾನ

ವಿಟ್ಲ: ವಿಟ್ಲದ ಯಕ್ಷ ಸಿಂಧೂರ ಪ್ರತಿಷ್ಠಾನದ ವತಿಯಿಂದ ಪ್ರತಿ ವರ್ಷ ನೀಡಲಾಗುವ ‘ಯಕ್ಷಸಿಂಧೂರ ಪ್ರಶಸ್ತಿ’ಯನ್ನು ಈ ವರ್ಷ ಹಿರಿಯ ಯಕ್ಷಗುರು ಪಿ. ದೂಮಣ್ಣ ಶೆಟ್ಟಿಯವರಿಗೆ ವಿಟ್ಲದ ಶ್ರೀ ಭಗವತೀ ದೇವಸ್ಥಾನದ ಜಾತ್ರೋತ್ಸವ ಸಂದರ್ಭದಲ್ಲಿ ನೀಡಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಯಕ್ಷಗಾನ ವಿದ್ವಾಂಸ ಡಾ. ಪ್ರಭಾಕರ ಶಿಶಿಲ ಮಾತನಾಡಿ ‘ಜಾತಿ, ಗಡಿ, ಮತ ಧರ್ಮವನ್ನು ಮೀರಿದ ಶ್ರೇಷ್ಠ ಕಲೆ ಯಕ್ಷಗಾನ. ಮನಸ್ಸನ್ನು ಅರಳಿಸುವ ಶಕ್ತಿ ಈ ಕಲೆಗಿದೆ. ಸರ್ವೋತ್ಕೃಷ್ಟವಾದ ಈ ಕಲೆಯನ್ನು ಯಕ್ಷ ಶಿಕ್ಷಣದ ಮೂಲಕ ಔಚಿತ್ಯಪೂರ್ಣವೇ ಆಗಿದೆ ಎಂದರು.
ಪುತ್ತೂರು ವಿವೇಕಾನಂದ ಕಾಲೇಜಿನ ಉಪನ್ಯಾಸಕ ಡಾ| ಅರುಣ ಪ್ರಕಾಶ್ ಅಭಿನಂದನಾ ಭಾಷಣ ಮಾಡಿದರು. ಕೇಪು ಕಲ್ಲಂಗಳ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಾಲತಿ ದಿನೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಪ್ರತಿಷ್ಠಾನದ ಸಂಚಾಲಕ ಚಣಿಲ ಸುಬ್ರಹ್ಮಣ್ಯ ಭಟ್ ಪ್ರಸಾವಿಸಿ ಸ್ವಾಗತಿಸಿದರು. ರಮೇಶ್ ಬಿ.ಕೆ ವಂದಿಸಿದರು. ಸೀತಾಲಕ್ಷ್ಮಿ ವರ್ಮ ಕಾರ್ಯಕ್ರಮ ನಿರೂಪಿಸಿದರು. ನಂತರ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಡಾ. ಪಟ್ಟಾಜೆ ಗಣೇಶ್ ಭಟ್ ವಿರಚಿತ ‘ಪಾಂಚಜನ್ಯ” ಎಂಬ ಯಕ್ಷಗಾನ ಬಯಲಾಟ ನಡೆಯಿತು.

More from the blog

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...