Friday, January 30, 2026

ರಫೀಕ್ ಕೆ.ಎಂ. ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ವಿಟ್ಲ: 2018ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಸರಕಾರದಿಂದ ಪ್ರಕಟಗೊಂಡಿದ್ದು, ಮಂಗಳೂರು ಸಮೀಪದ ಪಣಂಬೂರು ಪೊಲೀಸ್ ಇನ್ಸ್‌ಪೆಕ್ಟರ್ ಆಗಿದ್ದ, ಪ್ರಸ್ತುತ ಬೆಂಗಳೂರು ವಿವೇಕನಗರ ಇನ್ಸ್‌ಪೆಕ್ಟರ್ ಆಗಿರುವ ರಫೀಕ್ ಕೆ.ಎಂ. ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಿಸಲಾಗಿದೆ.
ವಿಟ್ಲ ಸಮೀಪದ ಕೆಲಿಂಜ ನಿವಾಸಿ ಅಬ್ದುಲ್ ಖಾದರ್ ನೆಬಿಸ ದಂಪತಿ ಪುತ್ರರಾಗಿರುವ ರಫೀಕ್ ಕೆ.ಎಂ. ಅವರ 14 ವರ್ಷದ ಪೊಲೀಸ್ ವೃತ್ತಿಯಲ್ಲಿ ಪ್ರಾರಂಭದಲ್ಲಿ ಮೈಸೂರು ಜಿಲ್ಲೆಯ ಹುಣಸೂರು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಕೆಲಸ ಆರಂಭಿಸಿದರು. ನಂತರ ನಂಜನಗೂಡು, ಪಿರಿಯಾಪಟ್ಟಣ ಹಾಗೂ ಮಂಗಳೂರಿನ ಕದ್ರಿ ಎಸ್ ಐ ಆಗಿ ಕರ್ತವ್ಯ ನಿರ್ವಹಿಸಿ ಜನಮೆಚ್ಚುಗೆ ಪಡೆದರು. ನಾಲ್ಕು ವರ್ಷದ ಹಿಂದೆ ಭಡ್ತಿ ಪಡೆದು ಮಂಗಳೂರು ಕಮಿಷನರ್ ಕಚೇರಿಯಲ್ಲಿ ಇನ್ಸ್‌ಪೆಕ್ಟರ್ ಆದರು. ಬಳಿಕ ಪಣಂಬೂರು ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಪ್ರಮುಖವೆನಿಸಿದ ರೇಪ್ ಕೇಸ್ ಜಾಲವೊಂದನ್ನು ಬೇಧಿಸಿ ರಾಜ್ಯದ ಗಮನಸೆಳೆದರು. ತನ್ನ ವೃತ್ತಿ ಜೀವನದಲ್ಲಿ ಹಲವಾರು ಕೇಸುಗಳನ್ನು ಬೇಧಿಸಿ ಅಪರಾಧಿಗಳನ್ನು ಮಟ್ಟ ಹಾಕಿದ ಕೀರ್ತಿ ಇವರಿಗಿದೆ. ಪ್ರಸ್ತುತ ಕಳೆದ ಒಂದು ವರ್ಷದಿಂದ ಬೆಂಗಳೂರಿನ ವಿವೇಕನಗರ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...