Sunday, February 1, 2026

ಮದರಸ ಶಿಕ್ಷಣದಿಂದ ಉತ್ತಮ ಸಮಾಜವನ್ನು ನಿರ್ಮಿಸಲು ಸಾಧ್ಯ- ಹಾಜಿ ಹಮೀದ್ ಕೊಡಂಗಾಯಿ

ವಿಟ್ಲ: ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವಿಟ್ಲ ರೀಜಿನಲ್ ಇದರ ವತಿಯಿಂದ ಎಸ್‌ಎಂಎ ಅಲರ್ಟ್ 2020 ಕಾರ್ಯಕ್ರಮ ಇತ್ತೀಚೆಗೆ ವಿಟ್ಲ ಶಾಂತಿನಗರ ಮದ್ರಸ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಎಸ್‌ಎಂಎ ಜಿಲ್ಲಾಧ್ಯಕ್ಷ ಹಾಜಿ ಹಮೀದ್ ಕೊಡಂಗಾಯಿ ಉದ್ಘಾಟಿಸಿ ಮಾತನಾಡಿ ಮದರಸ ಶಿಕ್ಷಣದಿಂದ ಉತ್ತಮ ಸಮಾಜವನ್ನು ನಿರ್ಮಿಸಲು ಸಾಧ್ಯ ಮದರಸ ಸಬಲೀಕರಣ ಹಾಗೂ ಎಸ್‌ಎಂಎ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮದರಸ ವ್ಯವಸ್ಥೆ ಆಧುನಿಕ ಶೈಲಿ ಗೊಳಿಸಲು ಎಸ್‌ಎಂಎ ರಾಜ್ಯ ಸಮಿತಿ ಮುಂದಾಗಲಿದೆ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಎಂಎ ವಿಟ್ಲ ರಿಜಿನಲ್ ಅಧ್ಯಕ್ಷ ಷರೀಫ್ ಉಕ್ಕುಡ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್‌ಎಂಎ ರಾಜ್ಯ ಕಾರ್ಯದರ್ಶಿ ಅಬ್ದುರಹ್ಮನ್ ಮದನಿ ಜಪ್ಪು ವಿಷಯ ಮಂಡಿಸಿದರು.

ಈ ಸಂದರ್ಭದಲ್ಲಿ ವಿಟ್ಲ ಎಸ್ ಜೆಎಂ ಅಧ್ಯಕ್ಷ ಅಬ್ದುರಹ್ಮನ್ ಮದನಿ ಪೆರುವಾಯಿ, ಹಕ್ಕಿಂ ಶಾಂತಿನಗರ, ವಿಟ್ಲ ಝೋನ್ ಕಾರ್ಯದರ್ಶಿ ಕಾಸಿಂ ಸಖಾಫಿ, ಅರೀಸ್ ಮದನಿ ಶಾಂತಿನಗರ, ಹಾರೀಶ್ ಓಕೆ ತೋರು, ಅಬೂಬಕ್ಕರ್ ಫೈ, ಎಸ್‌ಎಂಎ ಕೋಶಾಧಿಕಾರಿ ಉಸ್ಮಾನ್, ಕಾರ್ಪೋರೇಶನ್ ಸದಸ್ಯ ಹಸೈನಾರ್ ನೆಲ್ಲಿಗುಡ್ಡೆ ಉಪಸ್ಥಿತರಿದ್ದರು.
ಎಸ್‌ಎಂಎ ಪ್ರಧಾನ ಕಾರ್ಯದರ್ಶಿ ಮಜಿದ್ ಸಖಾಫಿ ಸ್ವಾಗತಿಸಿದರು. ರಜಾಕ್ ಸಹದಿ ವಂದಿಸಿದರು.

 

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...