Friday, June 27, 2025

ಅಕ್ರಮವಾಗಿ ಜನರನ್ನು ಸಾಗಿಸುವ ವಾಹನಗಳನ್ನು ವಶಕ್ಕೆ ಪಡೆದುಕೊಂಡ ವಿಟ್ಲ ಎಸ್.ಐ. ವಿನೋದ್ ರೆಡ್ಡಿ

ಬಂಟ್ವಾಳ: ಕೇರಳ ಗಡಿಭಾಗದಲ್ಲಿ ಅಕ್ರಮವಾಗಿ ಜನ ನುಸುಳುವಿಕೆಗೆ ಕಡಿವಾಣ ಹಾಕಲು ವಿಟ್ಲ ಎಸ್.ಐ.ವಿನೋದ್ ರೆಡ್ಡಿಯವರಿಂದ ಅವಿರತ ಶ್ರಮ. ಇಂದು ಕೂಡಾ ಕಾರ್ಯಚರಣೆ ನಡೆಸಿದ ಎಸ್.ಐ.ನಾಲ್ಕು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೇರಳದಲ್ಲಿ ಕೊರೊನಾ ವೈರಸ್ ಪ್ರಕರಣಗಳು  ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದಿಂದ ಜಿಲ್ಲೆಗೆ ಸಂಪರ್ಕವನ್ನು ಕಡಿತ ಮಾಡಲಾಗಿತ್ತು. ಆದರೆ ವಿಟ್ಲ ಮೂಲಕ ಅನೇಕ ವಾಹನಗಳು ಜಿಲ್ಲೆಗೆ ಅಗಮಿಸುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಗಡಿರಸ್ತೆಗಳನ್ನು ಬಂದ್ ಮಾಡಲಾಗಿತ್ತು.

ಅದರೂ ವಿಟ್ಲದಲ್ಲಿ ಕೇರಳಕ್ಕೆ ಸಂಪರ್ಕ ಮಾಡಲು ಅನೇಕ ಕಳ್ಳ ದಾರಿಗಳಿವೆ. ಇವತ್ತು ಬೆಳಿಗ್ಗೆ ಯಿಂದ ಕಳ್ಳದಾರಿಯಲ್ಲಿ  ಬಾಡಿಗೆ ಪಡೆದು ರಿಕ್ಷಾ ಹಾಗೂ ಬೈಕ್ ಮೂಲಕ ಜನರನ್ನು ಸಾಗಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಎಂಬ ದೂರು ಪೋಲೀಸರಿಗೆ ಬಂದಿತ್ತು.

ಆ ಹಿನ್ನೆಲೆಯಲ್ಲಿ ಕಾರ್ಯಚರಣೆ ಆರಂಭಿಸಿದ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಎರಡು ರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...