Saturday, July 12, 2025

ವಿಟ್ಲ: ಮೂವರು ಮಹಾರಾಷ್ಟ್ರ ಮೂಲದ ನಿರಾಶ್ರಿತರಿಗೆ ಆಶ್ರಯ

ವಿಟ್ಲ: ದೇಶದಾದ್ಯಂತ ಲಾಕ್‍ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮೂಲದ ಮೂವರು ನಿರಾಶ್ರಿತ ಮಹಿಳೆಯರು ಕಾಲ್ನಡಿಗೆ ಮೂಲಕ ವಿಟ್ಲ ಪರಿಸರಕ್ಕೆ ಅಗಮಿಸಿದ್ದು, ವಿಟ್ಲ ಎಸ್‍ಐ ವಿನೋದ್ ಕುಮಾರ್ ರೆಡ್ಡಿ ಅವರು ಮೂವರು ಮಹಿಳೆಯರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಆಶ್ರಯ ಕಲ್ಪಿಸಿದ್ದಾರೆ.
ಮಹಾರಾಷ್ಟ್ರದ ರಾಜ್ಯದ ನಾಸಿಕ್ ಎಂಬಲ್ಲಿಯ ಇಬ್ಬರು ವೃದ್ಧೆಯರು ಹಾಗೂ ಒಬ್ಬಳು ಮಹಿಳೆ ಸೇರಿದಂತೆ ಮೂವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಲಾಕ್‍ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ರೈಲು ಹಾಗೂ ಬಸ್ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕಾಲ್ನಡಿಗೆ ಮೂಲಕ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಆಗಮಿಸಿದ್ದು, ಅಲ್ಲಿಂದ ಸಾಲೆತ್ತೂರು ಮೂಲಕ ಕೊಡಂಗಾಯಿ ಭಾಗದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಕೊಡಂಗಾಯಿ ಯುವಕರು ವಿಟ್ಲ ಎಸ್‍ಐ ವಿನೋದ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ತೆರಳಿದ ಎಸ್‍ಐ ಮೂವರನ್ನು ವಿಚಾರಿಸಿದ್ದಾರೆ. ಅವರನ್ನು ಫ್ರೆಂಡ್ಸ್ ವಿಟ್ಲ ಆಂಬ್ಯುಲೆನ್ಸ್‍ನಲ್ಲಿ ವಿಟ್ಲಕ್ಕೆ ಕರೆ ತಂದು ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ ಅವರ ಮುಖಾಂತರ ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಆಶ್ರಯ ಕಲ್ಪಿಸಿದ್ದಾರೆ. ಸೋಮವಾರ ಬೆಳಗ್ಗೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಆಸ್ಪತ್ರೆಗೆ ಭೇಟಿ ಮಹಿಳೆಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಅವರನ್ನು ಮಂಗಳೂರಿಗೆ ವರ್ಗಾಯಿಸುವುದಾಗಿ ತಿಳಿಸಿದರು.
ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ದಿವಾಕರ, ಸಿಬ್ಬಂದಿ ಚಂದ್ರಶೇಖರ ವರ್ಮ, ಬಶೀರ್, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ವೇದಾವತಿ ಬಲ್ಲಾಳ್ ಉಪಸ್ಥಿತರಿದ್ದರು.

 

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...