Friday, June 27, 2025

ದುಬೈಯಲ್ಲಿ ಸಿಲುಕಿರುವ ಮೂವರಿಗೆ ತುರ್ತು ನೆರವು

ವಿಟ್ಲ: ದುಬೈಯ ಶಾರ್ಜಾದಲ್ಲಿ ಕೆಲಸಕ್ಕೆಂದು ತೆರಳಿ ಸಿಲುಕಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಯುವಕರಿಗೆ ಕರ್ನಾಟಕ ಎನ್‍ಆರ್‍ಐ ಫೊರಂ-ಯುಎಇ ಅಧ್ಯಕ್ಷ ಪ್ರವೀಣ್‍ಕುಮಾರ್ ಶೆಟ್ಟಿ ವಕ್ವಾಡಿ ಅವರು ತುರ್ತು ನೆರವು ನೀಡುವ ಜತೆಗೆ ಅಭಯ ಹಸ್ತವನ್ನು ಚಾಚಿದ್ದಾರೆ.
ಬಂಟ್ವಾಳ ತಾಲೂಕು ಕೆದಿಲ ನಿವಾಸಿ ಶ್ರೀವತ್ಸ ವಿ., ಪುತ್ತೂರು ತಾಲೂಕಿನ ದುರ್ಗಾಪ್ರಸಾದ್ ಗೌಡ, ದೀಪಕ್ ಬನ್ನೂರು ಅವರು ದುಬೈ ಶಾರ್ಜಾದಲ್ಲಿ ಕೆಲಸಕ್ಕೆಂದು ತೆರಳಿದ್ದು, ಕೋವಿಡ್ 19ರ ಲಾಕ್‍ಡೌನ್‍ನಿಂದ ಹಿಂದಿರುಗಿ ಬರಲಾಗದೆ ಅಲ್ಲಿ ಸಿಲಿಕಿ ಹಾಕಿಕೊಂಡಿದ್ದಾರೆ.
ಭಾರತಕ್ಕೆ ಕರೆಸಿಕೊಳ್ಳುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಕೆದಿಲ ನಿವಾಸಿ ಶ್ರೀವತ್ಸವ ವಿ. ಅವರ ಮನೆಯವರು ಪ್ರಧಾನಿ ಕಾರ್ಯಾಲಯವನ್ನು ಸಂಪರ್ಕಿಸುವ ಕಾರ್ಯವನ್ನೂ ಮಾಡಿದ್ದರು. ಆದರೆ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು ಮಾಡಿರುವ ಹಿನ್ನಲೆಯಲ್ಲಿ ಯಾವುದೇ ಪ್ರತಿಕ್ರಿಯೆ ಲಭಿಸಿರಲಿಲ್ಲ.
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಅವರ ಗಮನಕ್ಕೆ ವಿಚಾರ ಬರುತ್ತಿದ್ದಂತೆ ತುರ್ತಾಗಿ ಅವರ ಮಿತ್ರ ಅನಿಲ್ ಪಿಂಟೋ ಐಕಳ, ಕಿನ್ನಿಗೋಳಿ ಅವರನ್ನು ಸಂಪರ್ಕಿಸಿ, ಮೂವರ ಯೋಗ ಕ್ಷೇಮ ವಿಚಾರಿಸುವ ಕಾರ್ಯ ಮಾಡಿದ್ದರು. ಕರ್ನಾಟಕ ಎನ್‍ಆರ್‍ಐ ಫೊರಂ-ಯುಎಇ ಅಧ್ಯಕ್ಷ ಪ್ರವೀಣ್‍ಕುಮಾರ್ ಶೆಟ್ಟಿ ವಕ್ವಾಡಿ ಅವರು ಮೂವರ ರಕ್ಷಣೆ, ಪರಿಹಾರ ಮತ್ತು ಅಗತ್ಯ ಸಹಕಾರಕ್ಕೆ ನಾವಿದ್ದೇವೆ ಎಂದು ತುರ್ತು ನೆರವನ್ನೂ ನೀಡಿ ಧೈರ್ಯ ತುಂಬಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...