Monday, February 10, 2025

ಅಡಕೆ ಕೊಳೆರೋಗದ ಪರಿಹಾರದ ವಿಚಾರದಲ್ಲಿ ರೈತರಿಗೆ ಜಿಲ್ಲಾಡಳಿತದಿಂದ ಗೊಂದಲ ನಿವಾರಿಸಿ – ರೈತ ಸಂಘ ಆಗ್ರಹ

ವಿಟ್ಲ: ಅಡಕೆ ಕೊಳೆರೋಗದ ಪರಿಹಾರದ ವಿಚಾರದಲ್ಲಿ ರೈತರಿಗೆ ಗೊಂದಲವನ್ನು ಜಿಲ್ಲಾಡಳಿತ ಮಾಡುತ್ತಿದೆ. ಆನ್‌ಲೈನ್ ಪ್ರಕ್ರಿಯೆ ಮೂಲಕ ಹಣ ಖಾತೆಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದರೂ ಬಂಟ್ವಾಳ ತಾಲೂಕಿನಲ್ಲಿ ಇದುವರೆಗೆ ಯಾವೊಬ್ಬ ರೈತನಿಗೂ ಬಂದ ಮಾಹಿತಿ ಇಲ್ಲ. ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದ.ಕ ಜಿಲ್ಲಾ ಅಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಎಚ್ಚರಿಸಿದ್ದಾರೆ.
ಅವರು ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಜಿಲ್ಲೆಯ ಹಲವು ಭಾಗದಲ್ಲಿ ನದಿ ಹಾಗೂ ರಾಜ ಕಾಲುವೆ ಒತ್ತುವರಿಯ ಬಗ್ಗೆ ರೈತ ಸಂಘಕ್ಕೆ ದೂರುಗಳು ಬರುತ್ತಿವೆ. ಸ್ಥಳೀಯಾಡಳಿತ ಈ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಒತ್ತುವರಿಯನ್ನು ತೆರವು ಮಾಡಿ ರೈತರ ಹಿತ ಕಾಪಾಡಲು ಮುಂದಾಗದಿದ್ದರೆ ಹೋರಾಟಕ್ಕೆ ಇಳಿಯಬೇಕಾದೀತು ಎಂದು ತಿಳಿಸಿದರು.
ಬಂಟ್ವಾಳ ತಾಲೂಕು ಅಧ್ಯಕ್ಷ ಎಂ. ಸುಬ್ರಹ್ಮಣ್ಯ ಭಟ್ ಮಾತನಾಡಿ ಬಂಟ್ವಾಳ ಪುರಸಭೆ ವ್ಯಾಪ್ತಿಯ ದೆಂಜಿಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕ ರಾಜಕಾಲುವೆ ಒತ್ತುವರಿಯಾಗಿದೆ. ಇದರಿಂದ ನಾಯಿಲ, ಬೊಂಡಾಲ, ಕೋಮೆ, ಮರ್ಲಿಮಾರು ಪ್ರದೇಶದ ರೈತರ ಕೃಷಿ ಭೂಮಿಗಳಿಗೆ ನೀರು ನುಗ್ಗಿ ಕೃಷಿ ಕಾರ್‍ಯದಲ್ಲಿ ನಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಭೂಮಾಫಿಯ ಮಂದಿ ೧೨ ಮೀಟರ್ ಅಗಲವಿದ್ದ ತೋಡನ್ನು 6 ಮೀಟರ್ ಮಾಡಿ ತಡೆಗೋಡೆ ನಿರ್‍ಮಾಣ ಮಾಡಿದ್ದಾರೆ. ಇದರಿಂದ ಮಳೆ ನೀರು ಸರಾಗವಾಗಿ ಹರಿಯದೇ ಕೃಷಿ ಭೂಮಿಗೆ ನುಗ್ಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವ, ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ರೈತರಿಗೆ ನ್ಯಾಯೋಚಿತ ಪರಿಹಾರ ಸಿಕ್ಕಿಲ್ಲ. ಇದೇ ರೀತಿ ಮುಂದುವರಿದರೆ ಬಂಟ್ವಾಳ ಪುರಸಭೆ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರಧಾನ ಕಾರ್‍ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು, ಬಂಟ್ವಾಳ ತಾಲೂಕು ಕಾರ್‍ಯದರ್ಶಿ ಬಿ. ಸುದೇಶ್ ಮಯ್ಯ, ವಿಟ್ಲ ರೈತ ಸಂಘದ ಸುದೇಶ್ ಭಂಡಾರಿ, ರೈತರಾದ ಸೂರಜ್, ಲಕ್ಷ್ಮಣ ಮತ್ತಿತರರು ಉಪಸ್ಥಿತರಿದ್ದರು.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...