Friday, January 30, 2026

ವಿಟ್ಲ: ಬಿಜೆಪಿ ವತಿಯಿಂದ ದೀಪಾವಳಿ ಆಚರಣೆ

ವಿಟ್ಲ: ಬಿಜೆಪಿ ಎಂದಿಗೂ ಸಂಘಟನೆಯಲ್ಲಿ ತೊಡಗಿದವರಿಗೆ ಜವಾಬ್ದಾರಿ ನೀಡುತ್ತದೆಯೇ ಹೊರತು ಉದ್ಯಮಿಗಳಿಗೆ ಮಣೆ ಹಾಕುವುದಿಲ್ಲ. ಹಿರಿಯರ ಚಿಂತನೆ ಆಲೋಚನೆಗಳನ್ನು ಮೆಲುಕು ಹಾಕುವ ಕಾರ್ಯ ನಡೆಯಬೇಕು ಎಂದು ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷ ಆರ್.ಸಿ. ನಾರಾಯಣ ಹೇಳಿದರು.
ವಿಟ್ಲ ಜೋಗಿಮಠ ಯೋಗೀಶ್ವರ ಮಠದ ಬಳಿಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ದೀಪಾವಳಿ ಹಬ್ಬ ಆಚರಣೆ ಹಾಗೂ ಬಿಜೆಪಿ ಹಿರಿಯ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜೋಗಿಮಠ ಯೋಗೀಶ್ವರ ಮಠದ ಶ್ರೀ ಶ್ರದ್ದಾನಾಥ್ ಜೀ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿವೃತ್ತ ಸೈನಿಕರು ಹಣತೆ ಹಚ್ಚಿದರು. ಬಿಜೆಪಿ ಹಿರಿಯ ಕಾರ್ಯಕರ್ತರ ಅಭಿನಂದಿಸಲಾಯಿತು.
ಪುತ್ತೂರು ಗ್ರಾಮ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ರೈತ ಮೋರ್ಚಾದ ಪುನೀತ್ ಮಡತ್ತಾರು, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಶರಣ್, ಮಂಡಲ ಸದಸ್ಯ ಮೋಹನದಾಸ, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ಎಂ ವಿಟ್ಲ, ಪ್ರಧಾನ ಕಾರ್ಯದರ್ಶಿ ಕರುಣಾಕರ ನಾಯ್ತೊಟ್ಟು, ವಿಟ್ಲ ಶಕ್ತಿ ಕೇಂದ್ರಗಳ ಅಧ್ಯಕ್ಷರಾದ ವೀರಪ್ಪ ಗೌಡ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಂತ ನಾಯ್ಕ, ಮಹಾಶಕ್ತಿ ಕೇಂದ್ರದ ಸದಸ್ಯ ಜಗದೀಶ್ ಪಾಣೆಮಜಲು ಮತ್ತಿತರರು ಉಪಸ್ಥಿತರಿದ್ದರು.
ವಿಶ್ವನಾಥ ದೇವಾಡಿಗ ಪ್ರಾರ್ಥಿಸಿದರು. ವಿಟ್ಲ ಶಕ್ತಿಕೇಂದ್ರದ ಅಧ್ಯಕ್ಷ ಹರೀಶ್ ಸಿ.ಎಚ್. ಸ್ವಾಗತಿಸಿದರು. ವಿಟ್ಲ ಶಕ್ತಿ ಕೇಂದ್ರದ ಅಧ್ಯಕ್ಷ ಲೋಕನಾಥ ಶೆಟ್ಟಿ ವಂದಿಸಿದರು. ಹರೀಶ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...