Tuesday, January 27, 2026

ಬಾವಿಗೆ ಹಾರಿ ಆತ್ಮಹತ್ಯೆ

ವಿಟ್ಲ: ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ(75) ಮೃತಪಟ್ಟ ವ್ಯಕ್ತಿ. ತನ್ನ ತಮ್ಮನ ಮನೆಗೆ ಹೋದವರು ಅಲ್ಲಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪ್ರಿಲ್ 21ರ ರಾತ್ರಿ 10:30ರಿಂದ 22ರ ಬೆಳಗ್ಗೆ 07:30 ಮದ್ಯೆ ಅವರು ಬಾವಿಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ.

ವಯೋ ಸಹಜ ಕಾಯಿಲೆಯ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಡಿಕೊಂಡಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...

Bantwal : ಕೃಷಿ ಭೂಮಿ, ಕೊರಗ ಸಮುದಾಯ ಭವನಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ...