Friday, July 11, 2025

ನೇರಳಕಟ್ಟೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಅಧ್ಯಕ್ಷರಾಗಿ ಅಬೂಬಕ್ಕರ್ ಎನ್.ಕೆ, ಉಪಾಧ್ಯಕ್ಷರಾಗಿ ನಂದಿತಾ ಆಯ್ಕೆ

ವಿಟ್ಲ : ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಅಧ್ಯಕ್ಷರಾಗಿ ಅಬೂಬಕ್ಕರ್ ಎನ್.ಕೆ, ಉಪಾಧ್ಯಕ್ಷರಾಗಿ ನಂದಿತಾ ಆಯ್ಕೆಯಾಗಿದ್ದಾರೆ.

ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಂಗಣದಲ್ಲಿ ಸೋಮವಾರ ನಡೆದ ಎಸ್.ಡಿ.ಎಂ.ಸಿ ರಚನಾ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಕೀಲಾ ಕೆ. ಪೂಜಾರಿ, ಸದಸ್ಯರಾದ ಲತೀಫ್ ನೇರಳಕಟ್ಟೆ, ಧನುಂಜಯ ಗೌಡ, ಅಶೋಕ ರೈ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಉಪಸ್ಥಿತರಿದ್ದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಸದಸ್ಯರುಗಳಾಗಿ ನಿರಂಜನ್ ರೈ ಕುರ್ಲೆತ್ತಿಮಾರು, ಅಬ್ದುಲ್ ರಹಿಮಾನ್ ಪರ್ಲೊಟ್ಟು, ಅತಾವುಲ್ಲಾ ನೇರಳಕಟ್ಟೆ, ಚಂದ್ರಶೇಖರ ಪೆರಾಜೆ, ಸಾಹುಲ್ ಹಮೀದ್ ಪರ್ಲೊಟ್ಟು, ಹಂಝ ನೇರಳಕಟ್ಟೆ, ರಶೀದ್ ಪರ್ಲೊಟ್ಟು, ಮೋಹನ ಗೌಡ ಪೆರಾಜೆ, ಭಾರತಿ ಮುರುವ, ಮೋಹಿನಿ ನೇರಳಕಟ್ಟೆ, ರೇಣುಕಾ ಪರ್ಲೊಟ್ಟು, ಹೇಮಾವತಿ, ಲತಾ ನೆಕ್ಕರೆಮಠ, ಸುಮಯ್ಯ ನೇರಳಕಟ್ಟೆ, ಸಫಿಯ ನೇರಳಕಟ್ಟೆ, ಹಾಗೂ ನೆಬಿಸ ಕೋಚಪಲ್ಕೆ ಅವರು ಆಯ್ಕೆಯಾಗಿದ್ದಾರೆ.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಗೀತಾ ಕುಮಾರಿ ಸ್ವಾಗತಿಸಿ, ನಿರೂಪಿಸಿದರು. ಸಹ
ಶಿಕ್ಷಕಿಯರಾದ ಗೀತಾ ಪ್ರಸ್ತಾವನೆಗೈದರು, ಲೀಲಾವತಿ ವಂದಿಸಿದರು.
ಸೇಸಪ್ಪ ನಾಯ್ಕ್, ಹಾಗೂ ಸುಧಾಕರ ಶೆಟ್ಟಿ ಸಹಕರಿಸಿದರು.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...