Saturday, June 28, 2025

ಮುನ್ಸೂಚನೆಯಿಲ್ಲದೇ ವಿದ್ಯುತ್ ಸ್ಥಗಿತಗೊಳಿಸಿದ ಕೆಪಿಟಿಸಿಎಲ್: ಹಿಡಿಶಾಪ ಹಾಕಿದ ಗ್ರಾಹಕರು

ವಿಟ್ಲ: ಯಾವುದೇ ಮುನ್ಸೂಚನೆ ನೀಡದೇ ದಿನಪೂರ್ತಿ ವಿದ್ಯುತ್ ಸ್ಥಗಿತಗೊಳಿಸಿದ ಕೆಪಿಟಿಸಿಎಲ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕಿದ ಘಟನೆ ಸಂಭವಿಸಿದೆ.
ಪ್ರತಿ ಬುಧವಾರ ವಿಟ್ಲ ಭಾಗದಲ್ಲಿ ಟ್ರೀ ಕಟ್ಟಿಂಗ್ ಹಿನ್ನೆಲೆಯಲ್ಲಿ ವಿದ್ಯುತ್ ಸ್ಥಗಿತಗೊಳಿಸಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ ವರೆಗೆ ಹಾಗೂ ಸಂಜೆವರೆಗೂ ವಿದ್ಯುತ್ ಸ್ಥಗಿತಗೊಳಿಸಲಾಗುತ್ತಿದೆ. ಆದರೆ ಬುಧವಾರ ಬೆಳಗ್ಗೆ ಏಳು ಗಂಟೆಗೆ ಕೆಪಿಟಿಸಿಎಲ್ ಅಧಿಕಾರಿಗಳು ವಿದ್ಯುತ್ ಸ್ಥಗಿತಗೊಳಿಸಿದ್ದರು. ಸಂಜೆ ಐದು ಗಂಟೆಯಾದರೂ ವಿದ್ಯುತ್ ಸಂಪರ್ಕ ಬಂದಿಲ್ಲ. ಇದರಿಂದ ಆಕ್ರೋಶಿತರಾದ ಗ್ರಾಹಕರು ಮೆಸ್ಕಾಂ ಇಲಾಖೆಯಲ್ಲಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸಬ್ ಸ್ಟೇಶನ್‌ನಲ್ಲಿ ಕೆಲಸ ಕಾರ್‍ಯ ನಡೆಯುವ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ಇಲಾಖೆ ಸ್ಥಗಿತಗೊಳಿಸಿದ್ದಾರೆ, ಇದಕ್ಕೂ ನಮಗೂ ಸಂಬಂಧವಿಲ್ಲ ಎಂದು ಉತ್ತರಿಸಿದ್ದಾರೆ. ಬಳಿಕ ಗ್ರಾಹಕರು ಕೆಪಿಟಿಸಿಎಲ್ ಅಧಿಕಾರಿ ಸುನೀಲ್ ಅವರಿಗೆ ಕರೆ ಮಾಡಿದಾಗ ಉಡಾಫೆಯಿಂದ ಉತ್ತರಿಸಿದ್ದಾರೆ. ನಮಗೆ ಕೆಲಸ ಇದೆ. ಅದರಿಂದ ತೆಗೆದಿದ್ದೇವೆ. ನಮಗೆ ಇಷ್ಟ ಬಂದಾಗ ವಿದ್ಯುತ್ ಹಾಕುತ್ತೇವೆ, ನೀವು ಫೋನ್ ಕಟ್ ಮಾಡಿ ಎಂದು ಉಡಾಫೆಯಿಂದ ಉತ್ತರಿಸಿ ಪೋನ್ ಕಟ್ ಮಾಡಿದ್ದಾರೆ. ಇದರಿಂದ ಆಕ್ರೋಶಿತರಾದ ಗ್ರಾಮಸ್ಥರು ಉನ್ನತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಮುಸ್ಲಿಮರಿಗೆ ಉಪವಾಸ ಇರುವುದರಿಂದ ಕೆಪಿಟಿಸಿಎಲ್ ನಿರ್ಧಾರದಿಂದ ತೊಂದರೆ ಅನುಭವಿಸಿದ್ದಾರೆ. ಬೆಳಗ್ಗೆ ಏಳು ಗಂಟೆಗೆ ತೆಗೆದ ವಿದ್ಯುತ್ ಸಂಜೆ ಆರು ಗಂಟೆ ಬಳಿಕ ಹಾಕಿದ್ದಾರೆ. ಯಾವುದೇ ಮುನ್ಸೂಚನೆ ನೀಡದೇ ಬೆಳ್ಳಂಬೆಳಗ್ಗೆ ವಿದ್ಯುತ್ ಸ್ಥಗಿತ ಮಾಡಿದ್ದಲ್ಲದೇ ಈ ಬಗ್ಗೆ ಸಮರ್ಪಕ ಉತ್ತರ ನೀಡದೇ ಬೇಜಾಬ್ದಾರಿತನದಿಂದ ಉತ್ತರಿಸಿದ ಕೆಪಿಟಿಸಿಎಲ್ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

More from the blog

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...