Monday, January 26, 2026

ನೂತನ “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ”ದ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜೆ

ವಿಟ್ಲ: ಧರ್ಮ ಶಿಕ್ಷಣದ ದಿಂದ ವಂಚಿತರಾಗಿದ್ದೇವೆ ಆದ್ದರಿಂದ ಇಂದಿನ ಮಕ್ಕಳಿಗೆ ಧರ್ಮ ಶಿಕ್ಷಣ ನೀಡುವ ಅಗತ್ಯ ಇದೆ, ಬಿಲ್ಲವರು ಭಿನ್ನಾಭಿಪ್ರಾಯ ಬದಿಗೆ ಇಟ್ಟು ಸಂಘರ್ಷ ಇಲ್ಲದೆ ಒಟ್ಟಾಗಿರಬೇಕು ಎಂದು  ಪರಮಪೂಜ್ಯ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರ, ಕಣಿಯೂರು, ಇವರು ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಕುಳ ಗ್ರಾಮದ ಬಿಲ್ಲವ ಸಂಘ (ರಿ) ಕುಂಡಡ್ಕ ಇವರು ಕುಂಡಡ್ಕ ಗುರುನಗರ ಎಂಬಲ್ಲಿ ನೂತನವಾಗಿ ನಿರ್ಮಿಸಲಾದ “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ” ಇದರ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಆಶೀರ್ವಚನನ ನೀಡಿ ಮಾತನಾಡಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಸಮಾಜದ ಕಟ್ಟ ಕಡೆಯ ಮಗುವಿಗೂ ಶಿಕ್ಷಣ ದೊರೆಯಬೇಕು, ಸಮಾಜ ಕಟ್ಟುವಾಗ ಯಾವುದೇ ಯೋಜನೆ ಒಂದೇ ಸಮಾಜಕ್ಕೆ ಸೀಮಿತ ಮಾಡಲು ಆಗಲ್ಲ ಸಾಮೂಹಿಕ ನ್ಯಾಯಕ್ಕೆ ಒತ್ತು ಕೊಡುವ ಅಗತ್ಯವಿದೆ. ಮುಂದಿನ ಬಜೆಟಿನಲ್ಲಿ ನಾರಾಯಣ ಗುರು ನಿಗಮ ಘೋಷಣೆ ಆಗಲಿದೆ ಎಂದು ತಿಳಿಸಿದರು.

ಕುಂಡಡ್ಕ ಬಿಲ್ಲವ ಸಂಘ (ರಿ.)ದ ಅಧ್ಯಕ್ಷ ದೂಮಪ್ಪ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಹಾಲಿಂಗ ನಾಯ್ಕ, ದೈವ ನರ್ಥಕ ರಾಮಣ್ಣ ಕುಳ, ಸಭಾಭವನಕ್ಕೆ ಸ್ಥಳ ದಾನಿಗಳಾದ ಸಂಜೀವ ಪೂಜಾರಿ ದಂಪತಿಗಳನ್ನು, ಕಟ್ಟಡ ಸಮಿತಿಯ ಸಂಚಾಲಕರಾದ ಯತೀಶ್ ಪೂಜಾರಿ ದಂಪತಿಗಳನ್ನು ಗೌರವಿಸಲಾಯಿತು

ವೇದಿಕೆಯಲ್ಲಿ ಮುರುವ ಮಾಣಿಲ ಶ್ರೀ ಕಾಳಿಕಾಂಬಾ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀ ಕೃಷ್ಣ ಗೂರೂಜಿ, ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಸಂಜೀವ ಮಠಂದೂರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಕೋಶಾಧಿಕಾರಿ ಪದ್ಮರಾಜ್ ಆರ್., ಲಯನ್ಸ್‌ ಜಿಲ್ಲಾ ಪೂರ್ವ ರಾಜ್ಯಪಾಲರು ಲಯನ್ ಡಾ| ಗೀತಪ್ರಕಾಶ್ ಎ,, ಡಾಕ್ಟರ್ ರಾಜಾರಾಮ್ ಕೆ ಬಿ ಮಾಜಿ ಅಧ್ಯಕ್ಷರು ಯುವ ವಾಹಿನಿ ಕೇಂದ್ರ ಸಮಿತಿ,ರಾಧಾಕೃಷ್ಣ ಪೈ, ಉದ್ಯಮಿ, ವಿಟ್ಲ, ಕೆ. ಸಂಜೀವ ಪೂಜಾರಿ ಅಧ್ಯಕ್ಷರು, ದ. ಕ, ಜಿಲ್ಲಾ ಮೂರ್ತೆದಾರರ ಮಹಾಮಂಡಲ, ಚನ್ನಪ್ಪ ಗೌಡ ಯೋಜನಾಧಿಕಾರಿಗಳು , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕು, ಸಚಿನ್ ಕುಮಾರ್ ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಲೋಕೇಶ್ ತಂತ್ರಿಗಳು, ಸಂಜೀವ ಪೂಜಾರಿ ನಿಡ್ಯ ಅಧ್ಯಕ್ಷರು, ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘ ನಿ, ವಿಟ್ಲ, ಕೃಷ್ಣ ಎಂ ಪೂಜಾರಿ, ಉದ್ಯಮಿ, ಮುಂಬಯಿ, ಸಂತೋಷ್ ಜೀವನ್, ಕ್ರಷರ್‌ ಉದ್ಯಮಿ, ಮಾಡತ್ತಡ್ಕ, ಜಗದೀಶ್ ನಿಂಬಾಳ್ಕರ್‌ ಜೂನಿಯರ್ ಇಂಜಿನಿಯರ್ R.W.S. ಸಬ್ ಡಿವಿಷನ್ ಬಂಟ್ವಾಳ, ಸರಿತಾ ಮೇಲ್ವಿಚಾರಕರು ಗ್ರಾಮ ಅಭಿವೃದ್ಧಿ ಯೋಜನೆ, ಶ್ರೀಮತಿ ಪ್ರಮೀಳ ಯೋಜನೆಯ ವಿಟ್ಲ ವಲಯ ಅಧ್ಯಕ್ಷರು ಮೊದಲಾದವರು ಉಪಸ್ಥಿತರಿದ್ದರು
.
ಜೀವನ್ ಕೌಶಿಕ್ ಭವಿಷ್ಯ ಪ್ರಾರ್ಥಿಸಿ, ನಾರಾಯಣ ಪೂಜಾರಿ ಎಸ್‌. ಕೆ. ಗೌರವಾಧ್ಯಕ್ಷರು, ಬಿಲ್ಲದ ಸಂಘ (ರಿ.) ಕುಂಡಡ್ಕ, ಸಂಘದ ಪ್ರಾಸ್ತಾವಿಕ ವರದಿಯನ್ನು ಯಾಚಿಸಿದರು, ಸಂಘದ ನಿಕಟಪೂರ್ವ ಅಧ್ಯಕ್ಷ ವಿಠಲ ಪೂಜಾರಿ ಕುಂಡಡ್ಕ ಸ್ವಾಗತಿಸಿ, ಸಂಘದ ಕೋಶಾಧಿಕಾರಿ ಕೆ ಟಿ ಆನಂದ ಧನ್ಯವಾದವಿತರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರ್ವಹಿಸಿದರು .

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...