Friday, January 30, 2026

ಮಗುಚಿ ಬಿದ್ದ ರಿಕ್ಷಾ : ಚಾಲಕನಿಗೆ ಗಾಯ

ವಿಟ್ಲ: ಸಾರಡ್ಕ – ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡಿದೆ.

ಆಜೇರು ನಿವಾಸಿ ಶಾಂತಾರಾಮ ರಾವ್ ಅವರು ರಿಕ್ಷಾದಲ್ಲಿ ಮಂಗಳವಾರ ಬೆಳಗ್ಗೆ ತೋರಣಕಟ್ಟೆಯಿಂದ ಪರಿಯಲ್ತಡ್ಕಕ್ಕೆ ಹಾಲು ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಘಟನೆಯಿಂದ ರಿಕ್ಷಾದಲ್ಲಿ ಇದ್ದ ಸುಮಾರು ೫೦ಲೀಟರ್ ಹಾಲು ರಸ್ತೆಗೆ ಚೆಲ್ಲಲ್ಪಟ್ಟಿದೆ. ರಿಕ್ಷಾ ಚಾಲನೆ ಮಾಡುತ್ತಿದ್ದ ಶಾಂತಾರಾಮ ಅವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಇಳಿಜಾರು ಪ್ರದೇಶದಲ್ಲಿ ರಸ್ತೆಗೆ ಏಕಾಏಕಿ ದನ ಅಡ್ಡ ಬಂದಿದ್ದು, ತಪ್ಪಿಸಲು ಹೋಗುವ ಸಂದರ್ಭ ರಿಕ್ಷಾ ರಸ್ತೆಯ ಪಕ್ಕಕ್ಕೆ ಮಗುಚಿದೆ ಎಂದು ಹೇಳಲಾಗಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...