Tuesday, January 27, 2026

ಅಟೋ ರಿಕ್ಷಾ ಪಲ್ಟಿ : ಚಾಲಕ ಸಾವು

ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ.

ಜಗನ್ನಾಥ ಪೈಸಾರಿ ಮೃತಪಟ್ಟ ದುರ್ದೈವಿ ಚಾಲಕ.

ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಮಣಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಅಟೋರಿಕ್ಷಾ ರಸ್ತೆಗೆ ಪಲ್ಟಿಯಾಗಿ ಬಿದ್ದ ಕಾರಣ,ತಲೆಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ.

ತುಳು ನಾಟಕ ರಂಗದಲ್ಲಿ ಹಾಸ್ಯ ಅಭಿನಯದ ಮೂಲಕ ಮಿಂಚಿದ್ದ ಅವರು, ಕಳೆದ ಮೂವತ್ತು ವರ್ಷಗಳಿಂದ ಆಟೋರಿಕ್ಷಾ ಚಾಲಕರಾಗಿ’ರಿಕ್ಷಾ ಜಗ್ಗಣ್ಣ’ಎಂದೇ ಗುರುತಿಸಲ್ಪಟ್ಟಿದ್ದರು.

ಮೃತರ ಮನೆಗೆ ಹಲವಾರು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದರು. ಪತ್ನಿ, ಪುತ್ರಿ, ಪುತ್ರ ಇದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...