Thursday, June 26, 2025

ರಾಜ್ಯ ರೈತ ಸಂಘದ ಸಭೆಯಲ್ಲಿ ಜಿಲ್ಲೆಯ ರೈತರ ಸಮಸ್ಯೆ ಪ್ರಸ್ತಾಪ

ವಿಟ್ಲ: ಬೆಂಗಳೂರಿನ ರಾಜ್ಯ ರೈತ ಸಂಘ ಕಚೇರಿಯಲ್ಲಿ ನಡೆದ ರಾಜ್ಯ ಮಟ್ಟದ ರೈತರ ಸಭೆಯಲ್ಲಿ ದ.ಕ ಜಿಲ್ಲಾ ರೈತ ಸಂಘದ ಅಧ್ಯಕ್ಷ ಬೈಲುಗುತ್ತು ಶ್ರೀಧರ ಶೆಟ್ಟಿ, ಕಾರ್ಯದರ್ಶಿ ಮನೋಹರ ಶೆಟ್ಟಿ ಮತ್ತು ಜನಾಬ್ ಯೂಸೂಫ್ ಭಾಗವಹಿಸಿ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸಮಿತಿಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ನೆರೆ ಪರಿಹಾರ ನೀಡಲು ವಿಫಲವಾದ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿ ಮುಂದೆ ಅ.31 ರಂದು ಪ್ರತಿಭಟನೆ ನಡೆಸಲು, ನ.4 ರಂದು 16 ರಾಷ್ಟ್ರಗಳ ನಡುವೆ ನಡೆಯುವ ಮುಕ್ತ ವ್ಯಾಪಾರ ಒಪ್ಪಂದದಿಂದ ಕೃಷಿ ವಲಯಕ್ಕೆ ಭಾರಿ ಹೊಡೆತ ಬೀಳುವುದರಿಂದ ಕೃಷಿ ವಲಯವನ್ನು ಈ ಒಪ್ಪಂದದಿಂದ ಹೊರಗಿಡಲು ಆಗ್ರಹಿಸುವ ಬಗ್ಗೆ, ರಾಜ್ಯದ ರೈತರಿಗೆ ಬೆಳೆನಾಶ, ಮನೆನಾಶದ ವಿಷಯದಲ್ಲಿ ಪರಿಹಾರ ನೀಡುವ ಬಗ್ಗೆ, ಮಾತು ತಪ್ಪಿದ ಮುಖ್ಯಮಂತ್ರಿ ಯಡಿಯೂರಪ್ಪನವರ ಮನೆಗೆ ನ.7 ರಂದು ಸಹಸ್ರಾರು ಸಂಖ್ಯೆಯಲ್ಲಿ ರೈತರ ಮುತ್ತಿಗೆ ಹಾಕುವ ನಿರ್ಣಯವನ್ನು ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಕೈಗೊಳ್ಳಲಾಯಿತು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...