Tuesday, January 27, 2026

ವಿಟ್ಲ : ನ್ಯೂಬಿ ಶಾಲೆಯಲ್ಲಿ ಚಿಣ್ಣರೋತ್ಸವ

ವಿಟ್ಲ: ವಿಸ್ಡಂ ವೇವ್ ಅಕಾಡೆಮಿ, ’ವ್ವಾ’ ಆಯೋಜಿಸಿದ ’ನ್ಯೂಬೀ ಫ್ರೀ ಸ್ಕೂಲ್ ಚಿಣ್ಣರೋತ್ಸವ ’ ಕಾರ್‍ಯಕ್ರಮವು ಪುಟಾಣಿಗಳ ವೈವಿಧ್ಯಮಯ ಧಾರ್‍ಮಿಕ, ಮತ್ತು ಸಾಂಸ್ಕ್ರತಿಕ ಕಾರ್‍ಯಕ್ರಮಗಳೊಂದಿಗೆ ನಡೆಯಿತು.
ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬ್ ಅಬ್ದುಸ್ಸಲಾಂ ಲತೀಫಿ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು ಆಧುನಿಕತೆಯ ಜಂಜಾಟದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣದಲ್ಲಿ ಹೆತ್ತವರು ಎಡವಿದರೆ ಅದನ್ನು ಕಣ್ಣೀರಿನೊಂದಿಗೆ ಅನುಭವಿಸಬೇಕಾಗಬಹುದು. ಉತ್ತಮ ಪೀಳಿಗೆಗಾಗಿ ಮಕ್ಕಳಿಗೆ ಧಾರ್‍ಮಿಕ ಶಿಕ್ಷಣ ನೀಡಲು ನ್ಯೂಬಿಯಂತಹ ಶಾಲೆಗಳು ಪೂರಕ ವಾತಾವರಣವನ್ನು ಒದಗಿಸುತ್ತದೆ ಎಂದರು.
ಸಭೆಯನ್ನು ಉದ್ಘಾಟಿಸಿ ಮಾತನಾಡಿದ ’ವ್ವಾ’ ಸಂಸ್ಥೆಯ ನಿರ್ದೇಶಕ ಎಂ. ಯಾಸೀನ್ ಸಅದಿ, ಎಳೆ ಮನಸ್ಸುಗಳು ಧಾರ್‍ಮಿಕತೆಯಲ್ಲೇ ಭದ್ರವಾಗಲು ಅನುಕೂಲವಾಗುವ ರೀತಿಯಲ್ಲಿ ಅತೀ ವಿನೂತನವಾದ ಶೈಲಿಯಲ್ಲಿ ಈ ಶಾಲೆ ಗಮನಾರ್ಹ ಸೇವೆ ಸಲ್ಲಿಸುತ್ತಾ ಸಾಗುತ್ತಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹಿತ್ಯ ವೇದಿಕೆಯ ಜಿಲ್ಲಾಧ್ಯಕ್ಷ ಅಬೂಬಕರ್ ಅನಿಲಕಟ್ಟೆ ಮಾತನಾಡಿ ತಾಯಿಯ ವಾತ್ಸಲ್ಯ ದೊಂದಿಗೆ ಸಣ್ಣ ಮಕ್ಕಳಿಗೆ ಲೌಕಿಕ ಹಾಗೂ ಧಾರ್‍ಮಿಕ ಶಿಕ್ಷಣವನ್ನು ನೀಡುತ್ತಿರುವ ನ್ಯೂಬಿ ಶಾಲೆಯ ಪ್ರಯತ್ನ ಶ್ಲಾಘನೀಯ ಎಂದರು. ಅಬ್ದುಲ್ ಖಾದರ್ ಮುಸ್ಲಿಯಾರ್ ಅಳಕೆಮಜಲ್ ದುವಾ ನೆರವೇರಿಸಿದರು.
ವೇದಿಕೆಯಲ್ಲಿ ಡಿವಿಷನ್ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಶರಫೀ , ಮೂಡಂಬೈಲ್ ಉಸ್ಮಾನ್ ರಾಧುಕಟ್ಟೆ, ಅಬ್ದುಲ್ ರಹೀಂ ಸಖಾಫಿ ಅಲಾದಿ, ಸಿದ್ದೀಕ್ ಸೇರಾಜೆ ಉಪಸ್ಥಿತರಿದ್ದರು.
’ವ್ವಾ’ ಸಂಸ್ಥೆಯ ನಿರ್ದೇಶಕ ಅಬ್ದುರ್ರಹ್ಮಾನ್ ಸ ಅದಿ ಕೊಡಿಪ್ಪಾಡಿ ಸ್ವಾಗತಿಸಿದರು. ಸಂಚಾಲಕ ಹೈದರ್ ಅಳಕೆಮಜಲ್ ವಂದಿಸಿದರು. ಅಬ್ದುಸ್ಸಲಾಂ ಮದನಿ ಅಳಿಕೆ ಕಾರ್‍ಯಕ್ರಮ ನಿರೂಪಿಸಿದರು.

More from the blog

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...

Bantwal : ಕೃಷಿ ಭೂಮಿ, ಕೊರಗ ಸಮುದಾಯ ಭವನಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ...