Thursday, February 13, 2025

ವಿಟ್ಲ: ವಿದೇಶದಿಂದ ಊರಿಗೆ ಬಂದಿದ್ದ ಯುವಕ ಅನಾರೋಗ್ಯದಿಂದ ಸಾವು

ವಿಟ್ಲ: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್(38) ಮೃತಪಟ್ಟವರು.

ಇವರು ಕಳೆದ ಹಲವಾರು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದಿಂದ ಮೂರು ದಿನದ ಸ್ವದೇಶಕ್ಕೆ ಬಂದಿದ್ದರು. ಕೇರಳದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ಪುತ್ರಿ, ತಂದೆ, ತಾಯಿ ಇದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...