Wednesday, January 28, 2026

ವಿಟ್ಲ ಜೆಸಿಐಯಿಂದ ರಾಷ್ಟ್ರೀಯ ಯುವ ದಿನಾಚರಣೆ

ವಿಟ್ಲ: ವಿಟ್ಲ ಜೆಸಿಐ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಚಂದಳಿಕೆಯ ’ಯುವ ಕೇಸರಿ ಅಬೀರಿ-ಅತಿಕಾರಬೈಲಿನಲ್ಲಿ ನಡೆಯಿತು.
2021ರ ಸಾಲಿನ ವಿಟ್ಲ ಜೆ.ಸಿ.ಐ ನೂತನ ಅಧ್ಯಕ್ಷ ಜೆ.ಸಿ.ಚಂದ್ರಹಾಸ ಶೆಟ್ಟಿ ತಮ್ಮ ಘಟಕದ ಪ್ರಥಮ ಕಾರ್ಯಕ್ರಮವಾಗಿರುವುದು ಸಂತಸದ ವಿಚಾರವಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಯುವ ಕೇಸರಿ ಯುವಕ ಸಂಘದ ಅಧ್ಯಕ್ಷರಾದ ಗಂಗಾಧರ ಪೂಜಾರಿ ಪರನೀರು ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಭಾಘವಹಿಸಿದ ಜೆ.ಸಿ.ಅಣ್ಣಪ್ಪ ಸಾಸ್ತನರು ಯುವಕರ ಸಂಘಟನೆ ಜೆ.ಸಿ.ಐ ಹಾಗೂ ಸ್ವಾಮಿ ವಿವೇಕಾನಂದರ ತತ್ವಗಳಿಗೂ ತುಲನಾತ್ಮಕ ಸಂಬಂಧವನ್ನು ತಿಳಿಸಿದರು.
ನಿಕಟ ಪೂರ್ವಾಧ್ಯಕ್ಷರಾದ ಜೆ.ಸಿ.ದಿನೇಶ್ ಶೆಟ್ಟಿ ಯುವದಿನದ ಶುಭಾಶಯ ಕೋರಿದರು.ಯುವಕ ಮಂಡಲದ ಕಾರ್ಯದರ್ಶಿ ಯೋಗೀಶ ಕೇಪಳಗುಡ್ಡೆ ಉಪಸ್ಥಿತರಿದ್ದರು.
ವಿಟ್ಲ ಜೆಸಿಐ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಯುವಕೇಸರಿಯ ಸದಸ್ಯರುಗಳು ಉಪಸ್ಥಿತರಿದ್ದರು. ಈ ಯಶಸ್ವಿ ಕಾರ್ಯಕ್ರಮದ ಅಂತ್ಯದಲ್ಲಿ ಜೆ.ಸಿ ವಿಟ್ಲ ಘಟಕದ ಕಾರ್ಯದರ್ಶಿ ಜೆ.ಸಿ ಪರಮೇಶ್ವರ ಹೆಗಡೆ ವಂದಿಸಿದರು.

 

 

 

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...