Sunday, February 1, 2026

ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ: ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ

ವಿಟ್ಲ: 2019-20ನೇ ಸಾಲಿನ ಸ್ಕೌಟ್ ಮತ್ತು ಗೈಡ್ಸ್ ರಾಜ್ಯಮಟ್ಟದ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರಾಜಭವನದ ಗಾಜಿನಮನೆಯಲ್ಲಿ ನಡೆಯಿತು. ಕರ್ನಾಟಕದ ರಾಜ್ಯಪಾಲ ವಾಜುಭಾಯಿವಾಲಾರವರು ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರವನ್ನು ವಿತರಿಸಿದರು.
ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ೬ ಮಂದಿ ಗೈಡ್ ವಿದ್ಯಾರ್ಥಿನಿಯರು ದಕ್ಷಿಣ ಕನ್ನಡ ಜಿಲ್ಲೆಯ ಗೈಡ್ ಪ್ರತಿನಿಧಿಗಳಾಗಿ ಭಾಗವಹಿಸಿದ್ದರು. ಜೇಸೀಸ್ ಶಿಕ್ಷಣ ಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಅನ್ವೇಷಾ ಮಾನ್ಯ ರಾಜ್ಯಪಾಲರಿಂದ ಪ್ರಶಸ್ತಿ ಪಡೆದರು. ಕರ್ನಾಟಕ ರಾಜ್ಯದ ಒಟ್ಟು 5,000 ವಿದ್ಯಾರ್ಥಿಗಳು ರಾಜ್ಯಪುರಸ್ಕಾರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, 500 ವಿದ್ಯಾರ್ಥಿಗಳು ಕಬ್ಸ್, ಬುಲ್‌ಬುಲ್, ಸ್ಕೌಟ್, ಗೈಡ್ಸ್, ರೋವರ್, ರೇಂಜರ್ ವಿಭಾಗಗಳಿಂದ ಈ ಸಮಾರಂಭದಲ್ಲಿ ಭಾಗವಹಿಸಲು ಅವಕಾಶ ಪಡೆದಿದ್ದರು. ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯು ಪ್ರಥಮ ಬಾರಿಗೆ ಈ ಅವಕಾಶ ಪಡೆದಿರುವುದು ಹೆಗ್ಗಳಿಕೆಯೆನಿಸಿದೆ. ಹತ್ತನೇ ತರಗತಿಯ ಗೈಡ್‌ಗಳಾದ ತನೀಶಾ, ಪ್ರಣಮ್ಯ, ಅನ್ವೇಷಾ, ದ್ರವ್ಯಾ, ಚಿನ್ಮಯಿ, ಸಮೃದ್ಧಿಯವರು ಹಾಗೂ ಗೈಡ್ ಶಿಕ್ಷಕಿಯಾದ ಜಯಶ್ರೀ, ಕಬ್ ಶಿಕ್ಷಕಿ ನಮಿತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...