Thursday, February 13, 2025

ಎರಡು ಅಂಗಡಿಗಳಿಗೆ ನುಗ್ಗಿದ ಕಳ್ಳರು : ನಗದು, ದಿನಸಿ ಸಾಮಾಗ್ರಿ ಕಳವು

ವಿಟ್ಲ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ. ಚುನಾವಣೆ ಹಿನ್ನಲೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕಳ್ಳತನ ನಡೆಸಿ, ಅಷ್ಟೇ ಸಲೀಸಾಗಿ ತಪ್ಪಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ.

ವಿಟ್ಲ ಪೊಲೀಸ್ ಠಾಣೆಯ ಹಿಂಭಾಗ, ವಶ ಪಡಿಸಿಕೊಂಡ ವಾಹನಗಳನ್ನು ಸಂಗ್ರಹಿಸುಡುವ ಸ್ಥಳವಿದ್ದು, ಅದಕ್ಕೆ ಹೋಗುವ ರಸ್ತೆಯಲ್ಲೇ ಮಹಮ್ಮದ್ ಹಾಜಿ ಮಾಲೀಕತ್ವದ ದಿನಸಿ ಅಂಗಡಿಯಿದ್ದು, ಅದಕ್ಕೆ ಕಳ್ಳರು ಕನ್ನ ಹಾಕಿದ್ದಾರೆ. ಈ ಮೂಲಕ ವಿಟ್ಲ ಠಾಣಾ ಪೊಲೀಸರ ಭಯ ತಮ್ಮಗಿಲ್ಲ ಎಂದು ಕಳ್ಳರು ಘಂಟಘೋಷವಾಗಿ ಸಾರಿದ್ದಾರೆ.

ದಿನಸಿ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಹಾಗೂ ಮುಖ ಚಹರೆ ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಇಬ್ಬರು ಕಳ್ಳರು ಕೃತ್ಯ ಎಸಗಿರುವುದು ಕಾಣಿಸುತ್ತಿದೆ. ದಿನಸಿ ಅಂಗಡಿಯ ಹಿಂಭಾಗದಲ್ಲಿ ಛಾವಣಿಯ ಹಂಚು ತೆಗೆದು ಒಳ ನುಗ್ಗಿರುವ ಕಳ್ಳರು, ಕ್ಯಾಶ್ ಕೌಂಟರ್ ನಲ್ಲಿದ್ದ ರೂ ೮೦೦೦ ಮತ್ತು ಕಟ್ಟಿಟ್ಟಿದ್ದ ದಿನಸಿ ಸಾಮಾಗ್ರಿಯನ್ನು ಹೊತ್ತೊಯ್ದಿದ್ದಾರೆ.

ಬಳಿಕ ಪಕ್ಕದ ದೀಪಕ್ ಬೀಡಿ ಕಂಟ್ರಾಕ್ಟರ್ ನಿಸಾರ್ ವಿ.ಎಸ್. ಅವರಿಗೆ ಸೇರಿದ ಬೀಡಿ ಬ್ರ್ಯಾಂಚ್ ಹಿಬ್ಬಂದಿ ಬಾಗಿಲು ಮುರಿದು, ಒಳ ನುಗ್ಗಿದ್ದ ಕಳ್ಳರು, ಸಂಪೂರ್ಣ ಜಾಲಾಡಿ ಅಲ್ಲಿದ್ದ ಚಿಲ್ಲರೆ ಹಣವನ್ನು ಕದ್ದಿದ್ದಾರೆ. ಬಳಿಕ ಠಾಣೆಯಿಂದ ತುಸು ದೂರವಿರುವ ಮೇಗಿನ ಪೇಟೆಯಲ್ಲಿರುವ ಫೆಲಿಸ್ ಪಾಯಸ್ ಅವರಿಗೆ ಸೇರಿದ ಕೋಳಿಯ ಅಂಗಡಿಯ ಕಿಟಕಿ ಕಿತ್ತು ತೆಗೆದು ಒಳ ನುಗ್ಗಿದ ಕಳ್ಳರು, ಅಲ್ಲಿ ಕೂಡ ಒಂದಷ್ಟು ನಗದು ದೋಚಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...