Wednesday, February 4, 2026

ವಿಟ್ಲ ಲಯನ್ಸ್ ನಿಂದ ಸೇವಾ ಕಾರ್ಯಕ್ರಮ

ವಿಟ್ಲ: ಕೊರೊನಾ ಮಹಾಮಾರಿಯಿಂದ ಲಾಕ್‍ಡೌನ್ ವೇಳೆ ಹಗಲು ರಾತ್ರಿ ಕರ್ತವ್ಯ ನಿರ್ವಹಿತ್ತಿರುವ ವಿಟ್ಲ ಪೊಲೀಸರಿಗೆ ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಯಿತು.
ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಸದಸ್ಯ ಲೂಯಿಸ್ ಮಸ್ಕರೇಂಞಸ್ ಅವರ ನೇತೃತ್ವದಲ್ಲಿ ವಿಟ್ಲ ಸುತ್ತಮುತ್ತಲಿನ ಸುಮಾರು 85ಕ್ಕೂ ಅಧಿಕ ಕುಟುಂಬಗಳಿಗೆ ದಿನಸಿ ಸಾಮಗ್ರಿ ವಿತರಿಸಲಾಗಿದೆ. ಇದೀಗ ಹಗಲು ರಾತ್ರಿ ಕೊರೊನಾ ಹೋರಾಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಮಧ್ಯಾಹ್ನ ಊಟ ವ್ಯವಸ್ಥೆ ಕಲ್ಪಿಸಲಾಯಿತು. ವಿಟ್ಲ ಎಸ್‍ಐ ವಿನೋದ್ ಕುಮಾರ್ ರೆಡ್ಡಿ ಅವರು ಚಾಲನೆ ನೀಡಿದರು. ಲಯನ್ಸ್ ಕ್ಲಬ್ ಜಿಲ್ಲಾ ಉಪರಾಜ್ಯಪಾಲ ಡಾ. ಗೀತಾಪ್ರಕಾಶ್ ಹಾಗೂ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪೆಲ್ತಡ್ಕ ಶುಭ ಹಾರೈಸಿದರು.
ಈ ಸಂದರ್ಭ ಲಯನ್ಸ್ ಕ್ಲಬ್ ಕಾರ್ಯದರ್ಶಿ ಮನೋಜ್ ಕುಮಾರ್ ರೈ, ಸದಸ್ಯರಾದ ಮಂಗೇಶ್ ಭಟ್ ವಿಟ್ಲ, ಗಂಗಾಧರ್, ರವಿಶಂಕರ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

More from the blog

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...