Thursday, July 10, 2025

’ಶಿಬಿರಗಳಿಂದ ಮಾನವೀಯ ಧರ್ಮದ ಸಂದೇಶ’- ಮಾಣಿಲಶ್ರೀ

ವಿಟ್ಲ: ಮತೀಯ ಬೇಧ ಭಾವ ತೊರೆದು ಮಾನವೀಯ ಧರ್ಮ ಮೆರೆಯಬೇಕೆಂಬ ಸಂದೇಶವನ್ನು ಶಿಬಿರಗಳು ನೀಡುತ್ತದೆ. ಸಮಾಜಕ್ಕೆ ಅಗತ್ಯವಾದ ವಿಚಾರಗಳು ಧರ್ಮಾತೀತ, ಪಕ್ಷಾತೀತವಾಗಿ ನಡೆಯಬೇಕು. ಕೊರೊನಾ ವೈರಸ್ ನಿಂದ ಜಗತ್ತು ಮುಕ್ತವಾಗಲು ಸರ್ವರ ಸಹಕಾರಬೇಕು ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಅವರು ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಭಾನುವಾರ ಮಾಣಿಲ ಗ್ರಾಮ ಪಂಚಾಯಿತಿ, ಕೆಎಂಸಿ ಹಾಸ್ಪಿಟಲ್ ಬ್ಲಡ್ ಬ್ಯಾಂಕ್, ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನ, ಪೆರುವಾಯಿ ಫಾತಿಮಾ ಮಾತೆಯ ದೇವಾಲಯ, ಶ್ರೀಕ್ಷೇತ್ರ ಕುಕ್ಕಾಜೆ, ಜುಮ್ಮಾ ಮಸೀದಿ ಮಾಣಿಲ, ಸೌಹಾರ್ಧ ಫ್ರೆಂಡ್ಸ್ ಕ್ಲಬ್ ಹಾಗೂವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಶಿಬಿರವನ್ನು ಉದ್ಘಾಟಿಸಿದ ಪೆರುವಾಯಿ ಫಾತಿಮಾ ಮಾತೆಯ ದೇವಾಲಯ ಧರ್ಮಗುರುಗಳಾದ ವಿಶಾಲ್ ಮೋನಿಸ್ ಮಾತನಾಡಿ ರಕ್ತದಾನ ಸಾಮರಸ್ಯತೆಯ ಸಂಕೇತವಾಗಿದ್ದು, ಜಾತಿಧರ್ಮಕ್ಕನುಗುಣವಾಗಿ ರಕ್ತ ವಿಂಗಡನೆಯಾಗುವುದಿಲ್ಲ. ಜನರ ಅವಶ್ಯಕತೆಯನ್ನು ಪೂರೈಸುವ ಶಿಬಿರಗಳು ಸಮಾಜಕ್ಕೆ ಬಹಳಷ್ಟು ಅವಶ್ಯಕವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಣಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು ವಹಿಸಿದ್ದರು. ಸುಮಾರು ೭೫ ಮಂದಿ ರಕ್ತದಾನದಲ್ಲಿ ಪಾಲ್ಗೊಂಡರು. ಪೆರುವಾಯಿ ಜುಮಾ ಮಸೀದಿಯ ಮಹಮ್ಮದ್ ಶರೀಫ್ ಮದನಿ ಮಾತನಾಡಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಬದುರುದ್ದೀನ್ ಎಂ. ಎನ್., ಪೆರುವಾಯಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೃಷ್ಣ ಮೂರ್ತಿ, ಮಾಣಿಲ ಜಿಎಚ್‌ಎಸ್ ದೈಹಿಕ ಶಿಕ್ಷಣ ಶಿಕ್ಷಕ ಉಮಾನಾಥ ಶೆಟ್ಟಿ ಎಂ., ಪಂಚಾಯಿತಿ ಸದಸ್ಯರಾದ ನಡುಮನೆ ಮಹಾಬಲ ಭಟ್, ಕೃಷ್ಣಪ್ಪ ಎಂ. ಮತ್ತಿತರರು ಉಪಸ್ಥಿತರಿದ್ದರು.

ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಲ್ಫ್ ಡಿಸೋಜ ಸ್ವಾಗತಿಸಿದರು. ಮಾಣಿಲ ಗ್ರಾಮ ಪಂಚಾಯಿತಿ ಸದಸ್ಯ ಶ್ರೀಧರ ಬಾಳೆಕಲ್ಲು ವಂದಿಸಿದರು. ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...