Monday, January 26, 2026

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಗರ್ಭವತಿ ಮಾಡಿದ ಆರೋಪ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ, ಗರ್ಭವತಿಯನ್ನಾಗಿಸಿದ ಆರೋಪದ ಮೇಲೆ ಪುತ್ತೂರಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿಯೋರ್ವನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಅಪ್ರಾಪ್ತೆ ನೀಡಿದ ದೂರಿನಂತೆ ಶುಕ್ರವಾರ ಸಂಜೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಚಂದನ್ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ: ಕಳೆದ ಎರಡು ವರ್ಷಗಳಿಂದ ಅಪ್ರಾಪ್ತ ಬಾಲಕಿ ತನ್ನ ದೂರದ ಸಂಬಂಧಿಯಾದ ಚಂದನ್ ನನ್ನು ಪ್ರೀತಿಸುತ್ತಿದ್ದು, 2019ರ ಡಿಸೆಂಬರ್ 26 ರಂದು ಇವರಿಬ್ಬರೇ ಹೋಗಿ ಮದುವೆಯಾಗಿದ್ದರು. ನಂತರ ಅಪ್ರಾಪ್ತೆ ಹಾಗೂ ಚಂದನ್ ರವರು ಅಪ್ರಾಪ್ತೆಯ ಮನೆಯಲ್ಲಿಯೇ ವಾಸ್ತವ್ಯವಿರುತ್ತಿದ್ದ ಎನ್ನಲಾಗಿದೆ. ಬುಧವಾರ ಸಂಜೆಯ ವೇಳೆಗೆ ಅಪ್ರಾಪ್ತ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡು ಮಂಗಳೂರು ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಪ್ರಾಪ್ತ ಬಾಲಕಿ ಗರ್ಭವತಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಬಾಲಕಿಗೆ 16 ವರ್ಷ 3 ತಿಂಗಳು ವಯಸ್ಸಾಗಿರುವ ಹಿನ್ನೆಲೆಯಲ್ಲಿ ಆರೋಪಿ ಚಂದನ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 71/2020 ಕಲಂ (u/c, -376) ಐಪಿಸಿ ಕಲಂ 4,6ಪೋಕ್ಸೋ ಕಾಯ್ದೆ ಯಡಿ ಪ್ರಕರಣ ದಾಖಲಿಸಲಾಗಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...