Wednesday, June 25, 2025

ವಿಟ್ಲ ಪ.ಪೂ.ಕಾಲೇಜಿನ ಮರ್ಯಮತುಲ್ ಶಮ್ಲಾಗೆ ಪಿ.ಸಿ.ಎಂ.ಬಿ. ಯಲ್ಲಿ 98%

ವಿಟ್ಲ: ವಿಟ್ಲದ ವಿಠಲ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರ್ಯಮತುಲ್ ಶಮ್ಲಾ 577 ಅಂಕ ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾಳೆ. ಪಿಸಿಎಂಬಿಯಲ್ಲಿ 392 ಅಂಕ ಪಡೆದು 98% ಫಲಿತಾಂಶ ದಾಖಲಿಸಿದ್ದಾಳೆ. ಫಿಸಿಕ್ಸ್ ಮತ್ತು ಮೆಥಮೆಟಿಕ್ಸ್‌ನಲ್ಲಿ ತಲಾ 100ಕ್ಕೆ 100 ಅಂಕ ಪಡೆದಿದ್ದಾಳೆ. ಇಂಗ್ಲಿಷ್‌ನಲ್ಲಿ 95, ಹಿಂದಿಯಲ್ಲಿ 90, ಕೆಮಿಸ್ಟ್ರಿಯಲ್ಲಿ 96, ಬಯೋಲಜಿಯಲ್ಲಿ 96 ಅಂಕ ಪಡೆದಿದ್ದಾಳೆ. ಈಕೆ ವಿಟ್ಲ ಸೆರಂತಿಮಠ ನಿವಾಸಿ ಉಮರ್ ದಾರಿಮಿ ಪಟ್ಟೋರಿ ಹಾಗೂ ನೆಬಿಸತುಲ್ ಮುನೀರಾ ಅವರ ಹಿರಿಯ ಮಗಳು. ಎಸ್ಸೆಸ್ಸೆಲ್ಸಿಯಲ್ಲಿ ಮರ್ಯಮತುಲ್ ಶಮ್ಲಾ 617 ಅಂಕ ದಾಖಲಿಸಿದ್ದಳು. ಮುಂದೆ ವೈದ್ಯಕೀಯ ಅಥವಾ ಎಂಜಿನಿಯರಿಂಗ್ ಮಾಡುವ ಅಭಿಲಾಷೆ ವ್ಯಕ್ತಪಡಿಸಿದ್ದಾಳೆ.

More from the blog

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...