Saturday, January 31, 2026

ವಿಟ್ಲ: ಇಬ್ಬರು ಯುವಕರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ 

ವಿಟ್ಲ: ಇಬ್ಬರು ಯುವಕರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಬಳಿಕ ಬೆತ್ತಲೆ ಫೋಟೋಗಳನ್ನು ಬಹಿರಂಗ ಪಡಿಸುವುದಾಗಿ ಬೆದರಿಕೆ ಹಾಕಿದ ಘಟನೆ ಬೋಳಂತೂರು ಗ್ರಾಮದಲ್ಲಿ ನಡೆದಿದೆ.

ಬೋಳಂತೂರು ಗ್ರಾಮದ ಅಬೂಬಕ್ಕರ್‌ ಸಿದ್ದಿಕ್‌ ಹಾಗೂ ಚಪ್ಪಿ ಆರೋಪಿಗಳು.

ಬೋಳಂತೂರು ಗ್ರಾಮದ ಮಹಿಳೆಯೊಬ್ಬರ ನಾದಿನಿ ಅಪ್ರಾಪ್ತ ಬಾಲಕಿ 2020ನೇ ಜನವರಿ ತಿಂಗಳಿನಲ್ಲಿ ಮನೆಯ ನರೆಮನೆಯ ಆರೋಪಿ ಅಬೂಬಕ್ಕರ್‌ ಸಿದ್ದಿಕ್‌ ಆತನ ಸ್ನೇಹಿತ ಚಪ್ಪಿ ಎಂಬವರು ಪೋನ್‌ ಮುಖಾಂತರ ಬಾಲಕಿಯಲ್ಲಿ ಸಲುಗೆಯಿಂದ ಮಾತನಾಡಿ ದಿನಾಂಕ:25.01.2020ರಂದು ರಾತ್ರಿ ಸಿದ್ದಿಕ್‌ ಪೋನ್‌ಲ್ಲಿ ನಿನ್ನೊಂದಿಗೆ ಮಾತನಾಡಲಿಕಿದೆ ಮನೆಯ ಹೊರಗೆ ಬಾ ಎಂದು ತಿಳಿಸಿ ಮನೆಯ ಅಂಗಳಕ್ಕೆ ಬಾಲಕಿ ಬಂದಾಗ ಆಕೆಯನ್ನು ಪುಸಲಾಯಿಸಿ ಅಂಗಳದಲ್ಲಿಯೇ ಲೈಂಗಿಕ ಕ್ರಿಯೆ ನಡೆಸಿ ಬಳಿಕ ಆತನ ಪೋನ್‌ಲ್ಲಿ ಬಾಲಕಿಯ ಬೆತ್ತಲೆ ಪೋಟೋಗಳನ್ನು ತೆಗೆದಾಗ ಸಿದ್ದಿಕ್‌ನ ಸ್ನೇಹಿತ ಚಪ್ಪಿ ಕೂಡ ಆಕೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ತಮ್ಮ ಮೋಬೈಲ್‌ನಲ್ಲಿರುವ ಬೆತ್ತಲೆ ಪೋಟೋಗಳನ್ನು ಬೇರೆಯವರಿಗೆ ಕಳುಹಿಸುವುದಾಗಿ ಹೆದರಿಸಿ ಬಳಿಕ ಇತ್ತೀಚೆಗೆ ಹಿಂದೆ ನಡೆದ ರೀತಿ ಲೈಂಗಿಕ ಕ್ರಿಯೆ ಮಾಡಲು ಬರುವಂತೆ ಆರೋಪಿತರು ಪದೇ ಪದೇ ಒತ್ತಾಯಪಡಿಸಿದ್ದಾರೆ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...