Thursday, February 13, 2025

ವಿಟ್ಲದಲ್ಲಿ ವಿಜೃಂಭಿಸಿದ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ

ವಿಟ್ಲ: ಇತಿಹಾಸ ಪ್ರಸಿದ್ದ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವವು ಜ.21ರಂದು ರಾತ್ರಿ ಸಂಭ್ರಮ ಸಡಗರದಿಂದ ನಡೆಯಿತು. ರಾತ್ರಿ ಕಡಂಬುವಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಆಗಮಿಸಿದ ಬಳಿಕ ದೇವರ ಬಲಿ ಉತ್ಸವ ನಡೆಯಿತು.

ಬಳಿಕ ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು. ಸಿಡಿಮದ್ದು ಪ್ರದರ್ಶನದ ಬಳಿಕ ಶ್ರೀ ಪಂಚಲಿಂಗೇಶ್ವರ ದೇವರ ವರ್ಷಾವಧಿ ಮಹಾರಥೋತ್ಸವ ’ಇಟ್ಟೆಲಾಯನೊ’ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತಾದಿಗಳು ರಥೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು. ರಥೋತ್ಸವದದ ಬಳಿಕ ದೇವರ ಬೀದಿ ಮೆರವಣಿಗೆ, ಶಯನೋತ್ಸವ ನಡೆಯಿತು.


ಬೆಳಗ್ಗೆ ಕ್ಷೇತ್ರದಲ್ಲಿ ದರ್ಶನ ಬಲಿ, ರಾಜಾಂಗಣದ ಬಟ್ಲು ಕಾಣಿಕೆ ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು. ಸಾಂಸ್ಕೃತಿಕ ಕಾರ್‍ಯಕ್ರಮದ ಅಂಗವಾಗಿ ರಾತ್ರಿ ವಿಟ್ಲ ಮಾದರಿ ಶಾಲಾ ವಠಾರದಲ್ಲಿ ಪಟ್ಲ ಯಕ್ಷಾಭಿಮಾನಿಗಳ ಬಳಗ ವಿಟ್ಲ ಅರ್ಪಿಸುವ ಬಪ್ಪನಾಡು ಮೇಳದವರಿಂದ ಬೊಳ್ಳಿದ ಬೊಲ್ಗುಡೆ ಯಕ್ಷಗಾನ ಬಯಲಾಟ ನಡೆಯಿತು.

ಹರಿದುಬಂದ ಭಕ್ತಸಮೂಹ….: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಊರ ಪರವೂರಿನ ಸಾವಿರಾರು ಭಕ್ತಾಧಿಗಳು ಬೆಳಗ್ಗಿನಿಂದಲೇ ದೇವಾಲಯಕ್ಕೆ ಆಗಮಿಸಲಾರಂಭಿಸಿದರು. ಮುಖ್ಯ ರಸ್ತೆಯಿಂದ ದೇವಾಲಯಕ್ಕೆ ತೆರಳುವ ಎಲ್ಲಾ ಒಳರಸ್ತೆಯಲ್ಲಿ ಬೆಳಿಗ್ಗಿನಿಂದಲೇ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಭಕ್ತಾಧಿಗಳು ತಮ್ಮ ವಾಹನವನ್ನು ದೇವಳದ ಹೊರಭಾಗದಲ್ಲಿ ನಿಲ್ಲಿಸಿ ನಡೆದುಕೊಂಡೇ ದೇವಸ್ಥಾನಕ್ಕೆ ತಲುಪ ಬೇಕಾಯಿತು.

ಪೊಲೀಸ್ ಬಂದೋಬಸ್ತು..
ವಿಟ್ಲ ರಥೋತ್ಸವದ ಪ್ರಯುಕ್ತ ವಿವಿಧ ಕಡೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದ್ದು, ದೇವಾಲಯದ ಜಾತ್ರಾ ಗದ್ದೆ ಸಹಿತ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿಟ್ಲ ಠಾಣಾ ಎಸ್.ಐ. ಯಲ್ಲಪ್ಪರವರ ನೇತೃತ್ವದಲ್ಲಿ ವಿಶೇಷ ಬಂದೋ ಬಸ್ತ್‌ನ್ನು ಏರ್ಪಡಿಸಲಾಗಿತ್ತು. ಮೊದಲೇ ಕೆಲವೆಡೆ ಸಿಸಿ ಕ್ಯಾಮರಾವನ್ನು ಅಳವಡಿಸಲಾಗಿದ್ದರೂ ಜಾತ್ರಾ ಪ್ರಯುಕ್ತ ಕೆಲವೊಂದು ಆಯಕಟ್ಟಿನ ಸ್ಥಳದಲ್ಲಿ ಹೆಚ್ಚುವರಿಯಾಗಿ ಸಿ.ಸಿ ಕ್ಯಾಮರವನ್ನು ಅಳವಡಿಸಲಾಗಿತ್ತು. ಅಹಿತಕರ ಘಟನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಕಳ್ಳರ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸರು ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ದೇವಸ್ಥಾನದ ಸಮೀಪ ಸಾರ್ವಜನಿಕರಿಗೆ ಸಹಾಯವಾಗಲೆಂದು ಪೊಲೀಸ್ ಔಟ್‌ಪೋಸ್ಟನ್ನು ತೆರೆಯಲಾಗಿತ್ತು.

 

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...