Saturday, January 31, 2026

ಶ್ರವಣ ತಪಾಸಣಾ ಶಿಬಿರದ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ: ಜಿಲ್ಲಾ ಆರೋಗ್ಯಹಾಗೂ ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ದೂರು

ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರ್ತವ್ಯದ ಮೇರೆಗೆ ಆಗಮಿಸಿದ ಶ್ರವಣ ತಪಾಸಣಾ ಶಿಬಿರದ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವಾಚ್ಯವಾಗಿ ನಿಂದಿಸಿದ ಬಗ್ಗೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯ ಮೂಲಕ ಜಿಲ್ಲಾ ಆರೋಗ್ಯಹಾಗೂ ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ದೂರು ನೀಡಲಾಗಿದೆ.

ಆರೋಗ್ಯ ಕೇಂದ್ರದಲ್ಲಿ ಕ್ಲರ್ಕ್ ಕೆಲಸ ನಿರ್ವಹಿಸುವ ಫೌಲ್ ಮಸ್ಕರೇನಿಯಸ್ ಎಂಬವರು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಗ್ಗೆ ದಕ್ಷಿಣ ಕನ್ನಡ ಎನ್. ಪಿ. ಪಿ. ಸಿ. ಡಿ. ಕಾರ್ಯಕ್ರಮದ ಶೋಭಿತಾ, ಕಾವ್ಯಶ್ರೀ ಅವರು ದೂರು ನೀಡಿದ್ದಾರೆ.

ಸಮುದಾಯ ಆರೋಗ್ಯ ಕೆಂದ್ರದ ವೈಧ್ಯಾಧಿಕಾರಿಗಳನ್ನು ನಿರ್ಲಕ್ಷಿಸಿ ಆಸ್ಪತ್ರೆ ಸಂಪೂರ್ಣ ತನ್ನ ಸುಪರ್ಧಿಯಲ್ಲಿ ಇರುವಂತೆ ನಡೆದುಕೊಳ್ಳುವ ಜತೆಗೆ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರನ್ನು, ವಾಹನ ಚಾಲಕರನ್ನು, ಅಗತ್ಯ ದುರಸ್ಥಿ ಕಾರ್ಯಕ್ಕೆ ತೆರಲಿದ ಸಿಬ್ಬಂದಿಗಳ ಜತೆಗೂ ಈ ಹಿಂದೆ ದರ್ಪ ತೋರಿದ ಘಟನೆ ನಡೆದಿದೆ. ಒಬ್ಬ ಸಿಬ್ಬಂದಿಯಿಂದ ಸಾರ್ವಜನಿಕರಿಗೆ ಸಿಗುವ ಸವಲತ್ತುಗಳೂ ಸರಿಯಾಗಿ ಸಿಗದ ಬಗ್ಗೆ ಆಕ್ರೋಶಕ್ಕೆ ಕಾರಣವಾಗಿದೆ.

ಬುಧವಾರ ಆಸ್ಪತ್ರೆಗೆ ಬೇಟಿ ನೀಡಿದ ಮೆಡಿಕಲ್ ಟೀಮ್ ಜತೆಗೆ ಘರ್ಷಣೆ ಮಾಡಿದ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಸೂಕ್ತ ತನಿಖೆಯನ್ನು ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...