Thursday, January 29, 2026

ಕೆಳಗಿನ ವಗ್ಗ: ಧಾರಾಕಾರ ಮಳೆಗೆ ರಸ್ತೆ ಬದಿ ಗುಡ್ಡ ಜರಿತ ಅವೈಜ್ಞಾನಿಕ ಕಾಮಗಾರಿ ಆರೋಪ

ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಸುರಿಯುತ್ತಿರುವ ಮಳೆಗೆ ‌ಶನಿವಾರ ರಾತ್ರಿ

ಬಿ.ಸಿ.ರೋಡ್- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಳಗಿನ ವಗ್ಗ, ಆಲಂಪುರಿ ಕ್ರಾಸ್ ಬಳಿ ರಸ್ತೆ ಬದಿಯ ಗುಡ್ಡ ಜರಿದು ಸುಮಾರು 50 ಕ್ಕೂ ಹೆಚ್ಚು ಅಡಿಕೆ ಮರಗಳು ಧರಾಶಾಯಿಯಾಗಿದೆ.

ಈ ಜಾಗ ಇಲ್ಲಿನ ಸ್ಟ್ಯಾನಿ ಲೋಬೋ ಅವರಿಗೆ ಸೇರಿದ್ದು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ವೇಳೆ ಅವೈಜ್ಞಾನಿಕ ವಾಗಿ ರಸ್ತೆ ಬದಿಯ ಗುಡ್ಡವನ್ನು ಅಗೆದಿರುವುದೇ ಜರಿತಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಈಗಾಗಲೇ ರಸ್ತೆ ಇನ್ನೊಂದು ಬದಿಯಲ್ಲಿದ್ದ ಮನೆಯನ್ನು ಹೆದ್ದಾರಿ ಕಾಮಗಾರಿ ವೇಳೆ ತೆರವುಗೊಳಿಸಿದ್ದು, ತೋಟದ ಭಾಗದ ಜಾಗದಲ್ಲಿದ್ದ ಬಂಡೆಯನ್ನು ಒಡೆದು ಹಾಕಿದ್ದಾರೆ. ರಸ್ತೆ ಬದಿ ತಡೆ ಗೋಡೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದು ಇನ್ನೂ ನಿರ್ಮಿಸಿಲ್ಲ. ಇದೀಗ ತೋಟಕ್ಕೆ ಹಾನಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...