Tuesday, January 27, 2026

ಶನಿವಾರ, ಭಾನುವಾರ ವೀಕೆಂಡ್ ಕರ್ಫೂ, ಯಾವುದಕ್ಕೆ ಅವಕಾಶ, ಯಾವುದಕ್ಕೆ ನಿರ್ಬಂಧ?

ಮಂಗಳೂರು: ದ.ಕ. ಜಿಲ್ಲಾದ್ಯಂತ ಮೇ 7ರಂದು ಶುಕ್ರವಾರ ರಾತ್ರಿ 9 ಗಂಟೆಯಿಂದ ಮೇ 10ರಂದು ಸೋಮವಾರ ಬೆಳಗ್ಗೆ 6 ಗಂಟೆಯ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಔಷಧಿ ಅಂಗಡಿಗಳು ಮತ್ತು ಆಸ್ಪತ್ರೆಗಳನ್ನು ಹೊರತುಪಡಿಸಿ ಬಾಕಿ ಎಲ್ಲಾ ರೀತಿಯ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಿದೆ. ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24×7 ಕಾರ್ಯಾಚರಣೆಗಳ ಅಗತ್ಯವಿರುವ ಕೈಗಾರಿಕೆಗಳು/ಕಂಪನಿಗಳು / ಸಂಸ್ಥೆಗಳಿಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ನಿರ್ಮಾಣ ಚಟುವಟಿಕೆಗಳು ನಡೆಯುವ ಸ್ಥಳದಲ್ಲೇ ಕಾರ್ಮಿಕರು ಲಭ್ಯವಿದ್ದಲ್ಲಿ ಕಾಮಗಾರಿ ನಡೆಸಬಹುದಾಗಿದೆ. ಆದರೆ ಹೊರಗಿನ ಪ್ರದೇಶಗಳಿಂದ ಕಾರ್ಮಿಕರನ್ನು ಕರೆತರಲು ಅವಕಾಶವಿಲ್ಲ. ರೋಗಿಗಳು ಮತ್ತು ಅವರ ಪರಿಚಾರಕರು / ವೈದ್ಯಕೀಯ ತುರ್ತು ಸಂದರ್ಭ ಜನರಿಗೆ ಕನಿಷ್ಠ ಪುರಾವೆಗಳೊಂದಿಗೆ ಸಂಚರಿಸಲು ಅನುಮತಿಸಲಾಗಿದೆ.

ಮೇ 8 ಮತ್ತು 9ರಂದು ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ಸರಕಾರದ ಮಾರ್ಗಸೂಚಿಯಂತೆ ಜನರ ಪರಿಮಿತಿಗೊಳಪಟ್ಟು ಕೋವಿಡ್-19 ನಿಯಮ ಪಾಲಿಸಿ ನಡೆಸಲು ಅನುಮತಿ ನೀಡಲಾಗಿದೆ. ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರ ಪರಿಮಿತಿಗೊಳಪಟ್ಟು ಕೋವಿಡ್-19 ನಿಯಮ ಪಾಲಿಸಿ ನಡೆಸಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ತಿಳಿಸಿದ್ದಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...