ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇವುಗಳಲ್ಲದೇ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಭಾಗದಲ್ಲೂ ಸಾಧಾರಣ ಮಳೆಯಾಗಲಿದ್ದು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯನಗರ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.












