Wednesday, February 12, 2025

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮ

ಮಕ್ಕಳಿಗೆ ಜೀವನ ಶಿಕ್ಷಣ ನೀಡಿ, ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಬಹಳಮುಖ್ಯ,ಕುಟುಂಬದ ಅಳಿವು ಉಳಿವು ಮಹಿಳೆ ಕೈಯಲ್ಲಿದೆ ಎಂದು ಕೊಡಪದವು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕಿ ಆರತಿ ದಾಸಪ್ಪ ಹೇಳಿದರು..

ಅವರು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ (ರಿ.)ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮ ದಲ್ಲಿ ಅತಿಥಿ ಯಾಗಿ ಭಾಗವಹಿಸಿ ಮಾತಾಡಿದರು.

ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಕೊಂಕಣಪದವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.. ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ( ರಿ.)ಮಾಣಿ ಯ ಮಹಿಳಾ ಅಧ್ಯಕ್ಷೆ ಹರಿನಾಕ್ಷಿ ಮುರುವ ನೆರೆವೇರಿಸಿದರು.,. ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರಿನ ಮಹಿಳಾ ಸಂಘಟನಾ ನಿರ್ದೇಶಕಿ ನಯನ ಸುರೇಶ,ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.)ಮಾಣಿ ಯ ಅಧ್ಯಕ್ಷರಾದ ಸುರೇಶ್ ಸೂರ್ಯ,ಯುವವಾಹಿನಿ( ರಿ.) ಮಾಣಿ ಘಟಕದ ಮಹಿಳಾ ನಿರ್ದೇಶಕರಾದ ಶಕೀಲಾ ಕೃಷ್ಣ ಮಿತ್ತಕೋಡಿ, ಮೊದಲಾದವರು ಉಪಸ್ಥಿತರಿದ್ದರು.. ಸಂಪನ್ಮೂಲ ವ್ಯಕ್ತಿಗಳಾಗಿ “ಸ್ವಸ್ಥ ಮಹಿಳೆ- ಸ್ವಸ್ಥ ಮನೆ” ಎಂಬ ವಿಚಾರವಾಗಿ ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್ ಡಾಕ್ಟರ್ ಗಾಯತ್ರಿ ಜಿ ಪ್ರಕಾಶ್,ಮಹಿಳೆಯರಿಗೆ ಆಗುವ ಅರೋಗ್ಯ ಸಮಸ್ಯೆ ಬಗ್ಗೆ ಮಾಹಿತಿ ನೀಡಿ,ಮಹಿಳೆಯರೊಂದಿಗೆ ಮುಕ್ತವಾಗಿ ಚರ್ಚಿಸಿದರು. “ಕಾನೂನಿನ ಸಂರಕ್ಷಣೆಯಲ್ಲಿ ಮಹಿಳೆ “ಎಂಬ ವಿಷಯದ ಬಗ್ಗೆ ವಕೀಲರು, ನೋಟರಿ ಆದ ಶೋಭಾಲತಾ ಸುವರ್ಣ ವಿಚಾರ ವಿನಿಮಯ ಮಾಡಿ ಕಾನೂನನ್ನು ದುರುಪಯೋಗ ವಾಗದೆ ಸದುಪಯೋಗ ಪಡೆದುಕೊಳ್ಳಬೇಕು, ನಮ್ಮನ್ನು ಮೊದಲು ನಾವು ಅರ್ಥ ಮಾಡಿಕೊಳ್ಳಬೇಕು,ಸಂಸ್ಕಾರ ಯುಕ್ತವಾಗಿ ಜೀವನ ಸಾಗಿಸಿದರೆ ಯಾವ ಕಾನೂನಿನ ರಕ್ಷಣೆ ಅಗತ್ಯವಿಲ್ಲ ವೆಂದರು. ಕಾರ್ಯಕ್ರಮದಲ್ಲಿ ಸಂಘದ 10 ಗ್ರಾಮಗಳ ಮಹಿಳಾ ಅಧ್ಯಕ್ಷರುಗಳನ್ನು, ಮಾಜಿ ಅಧ್ಯಕ್ಷರುಗಳನ್ನು, ಪಂಚಾಯತ್ ಸದಸ್ಯೆರುಗಳನ್ನು ಅಭಿನಂದಿಸಾಲಾಯಿತು, ಸಂಘದ ಸದಸ್ಯೆ ಭಾರತೀ ಪ್ರಾರ್ಥಿಸಿ,ಯುವವಾಹಿನಿ(ರಿ.) ಮಾಣಿ ಘಟಕದ ಕಾರ್ಯದರ್ಶಿ ಶಾಲಿನಿ ಸ್ವಾಗತಿಸಿ,ಕಾರ್ಯಕ್ರಮದ ಸಂಚಾಲಕಿ ಡಾ. ತ್ರಿವೇಣಿ ರಮೇಶ್ ಮುಜಲ ಕಾರ್ಯಕ್ರಮದ ಪ್ರಸ್ತಾವಿಕ ಮಾಡಿ, ಸದಸ್ಯೆಯಾದ ಶುಭ ಪೆರ್ನೆ ವಂದಿಸಿದರು. ಮಾಣಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕಿ ಉಷಾ ದಿನಕರ್ ಹಾಗೂ ಘಟಕದ ಸದಸ್ಯ ರಾಜೇಶ್ ಬಲ್ಯ ಕಾರ್ಯಕ್ರಮ ನೀರೂಪಿಸಿದರು…

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...