Sunday, January 25, 2026

ಯಕ್ಷಗಾನದ ಹಿರಿಯ ಕಲಾವಿದ ನಿಧನ

ಪುತ್ತೂರು : ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ಭಂಡಾರಿ (73) ಇಂದು ಮುಂಜಾನೆ ನಿಧನರಾಗಿದ್ದಾರೆ. ತೆಂಕು ತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಸುದೀರ್ಘ ಆರು ದಶಕಗಳ ಕಾಲ ಸೇವೆ ಸಲ್ಲಿಸಿ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳನ್ನು ಗಳಿಸಿದ್ದರು.

ಅವರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಯಕ್ಷಾಭಿಮಾನಿಗಳನ್ನು ಹೊಂದಿದ್ದಾರೆ. ಶ್ರೀಧರ ಭಂಡಾರಿ ಅವರು ತಮ್ಮ 12ನೇ ವಯಸ್ಸಿನಲ್ಲೇ ಯಕ್ಷಗಾನ ಕಲಿತು, 15ನೇ ವಯಸ್ಸಿನಲ್ಲಿ ರಂಗಸ್ಥಳ ಏರಿದ್ದರು.

ಸುಬ್ರಹ್ಮಣ್ಯ ಮೇಳ, ಬಾಳಂಬೆಟ್ಟು ಮೇಳ, ಪುತ್ತೂರು ಮೇಳಗಳಲ್ಲಿ ಸೇವೆ ಸಲ್ಲಿಸಿದ ಶ್ರೀಧರ ಭಂಡಾರಿ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ಚರ ಮೇಳದಲ್ಲಿ ಸುದೀರ್ಘ 45 ವರ್ಷಗಳ ಕಾಲ ಪ್ರಮುಖ ವೇಷಧಾರಿಯಾಗಿದ್ದರು.

ಯಕ್ಷಗಾನದ ಸಿಡಿಲಮರಿ, ರಂಗಸ್ಥಳದ ರಾಜ, ಯಕ್ಷನಾಟ್ಯ ಚತುರ, ಶತ ಗಣಗಳ ರಾಜ ಇತ್ಯಾದಿ ಬಿರುದುಗಳನ್ನು ಪಡೆದಿದ್ದ ಇವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿದ್ದವು. ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟಗಳಲ್ಲಿ 150ಕ್ಕಿಂತಲೂ ಹೆಚ್ಚಿನ ಪುರಸ್ಕಾರಗಳನ್ನು ಇವರು ಪಡೆದಿದ್ದರು.

 

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...