ಬಂಟ್ವಾಳ :ಪರಮ ಪೂಜ್ಯ ದಿವ್ಯ ಚೇತನ ಪೇಜಾವರ ಶ್ರೀವಿಶ್ವೇಶ ತೀರ್ಥ ಶ್ರೀ ಪಾದಂಗಳವರ ದಿವ್ಯ ಹಸ್ತದಿಂದ ಉದ್ಘಾಟಿಸಲ್ಪಟ್ಟ ಕಾವಳಪಡೂರು ಗ್ರಾಮದ ಮಧ್ವ ಯಕ್ಷಕೂಟದ ವತಿಯಿಂದ ಯಕ್ಷಗಾನ ತಾಳಮದ್ದಳೆ ಜು.24ರಂದು ಮಧ್ವಪ್ಯಾಲೇಸ್ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲೆಯ ಖ್ಯಾತ ಕಲಾವಿದರ ಕೂಡುವಿಕೆಯಲ್ಲಿ ಶ್ರೀ ಶನೀಶ್ವರ ಮಹಾತ್ಮೆ ತಾಳಮದ್ದಳೆ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಕಲಾಭಿಮಾನಿಗಳು ಕೋವಿಡ್-19 ಸರಕಾರಿ ನಿಯಮವನ್ನು ಪಾಲಿಸಿ ಸಹಕರಿಸಬೇಕೆಂದು ಅಧ್ಯಕ್ಷ ಭಾಸ್ಕರ ಶೆಟ್ಟಿ ಮಧ್ವ ವಿನಂತಿಸಿದ್ದಾರೆ.


