Wednesday, January 28, 2026

ಧರ್ಮಸ್ಥಳ ಯಕ್ಷಗಾನ ಮಂಡಳಿ – ಸೇವೆ ಬಯಲಾಟ ಪ್ರದರ್ಶನ ಇಂದಿನಿಂದ

ಉಜಿರೆ: ಇನ್ನೂರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರು ಇಂದಿನಿಂದ (ಶುಕ್ರವಾರ) ಯಕ್ಷಗಾನ ಸೇವೆ ಬಯಲಾಟ ಪ್ರದರ್ಶನ ನೀಡುವರು.
ಕಳೆದ ಐದು ವರ್ಷಗಳಿಂದ ಪ್ರತಿದಿನ ಸಂಜೆ 7 ರಿಂದ ರಾತ್ರಿ 12ರ ವರೆಗೆ ಕಾಲಮಿತಿಯಕ್ಷಗಾನ ಪ್ರದರ್ಶನ ನೀಡುತ್ತಿದ್ದು ಇದಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಕಲಾವಿದರಿಗೂ ವಿಶ್ರಾಂತಿ ಹಾಗೂ ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೆ ಅವಕಾಶವಿದೆ. ಉದ್ಯೋಗದಲ್ಲಿರುವವರು, ವ್ಯವಹಾರ ನಡೆಸುವವರು ಹಾಗೂ ವಿದ್ಯಾರ್ಥಿಗಳು ಕೂಡಾ ಕಾಲಮಿತಿ ಯಕ್ಷಗಾನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
2021ರ ಮೇ 23 ರ ವರೆಗೆ ಧರ್ಮಸ್ಥಳ ಭಕ್ತರು ಹಾಗೂ ಅಭಿಮಾನಿಗಳು ತಮ್ಮ ಊರಿನಲ್ಲಿ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಿದ್ದಾರೆ.
2021ರ ಮೇ 24 ರಿಂದ 27ರ ವರೆಗೆ ಧರ್ಮಸ್ಥಳದಲ್ಲಿ ಮೂರು ದಿನ ಸೇವೆ ಬಯಲಾಟ ಪ್ರದರ್ಶನ ನೀಡಿ ವರ್ಷದ ತಿರುಗಾಟಕ್ಕೆ ಕಲಾವಿದರು ಮಂಗಳ ಹಾಡುವರು.

 

More from the blog

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...