Sunday, February 1, 2026

ವಾಕ್ ಮತ್ತು ಶ್ರವಣ ಸಮಸ್ಯೆಯನ್ನು ಹೊಂದಿರುವ ಯಶಸ್ವಿ .ಕೆ. ಗೆ ೫೭೬ ಅಂಕ

ಬಂಟ್ವಾಳ, ಎ. ೩೦: ವಾಕ್ ಮತ್ತು ಶ್ರವಣ ಸಮಸ್ಯೆಯನ್ನು ಹೊಂದಿರುವ ಬಂಟ್ವಾಳ ತಾಲೂಕಿನ ಕೆದಿಲ ನಿವಾಸಿ ಯಶಸ್ವಿ ಕೆ. ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. ೯೨.೧೬ ಅಂಕ ಗಳಿಸಿ ಸಾಧನೆ ಮೆರೆದಿದ್ದಾಳೆ.
ಬಂಟ್ವಾಳ ಎಸ್‌ವಿಎಸ್ ಕಾಲೇಜಿನ ವಿಭಾಗದ ಲ್ಯಾಬ್ ಅಸಿಸ್ಟೆಂಟ್ ತಿಮ್ಮಪ್ಪ ಮೂಲ್ಯ ಕೆ. ಮತ್ತು ಪೆರ್ನೆ ಗ್ರಾಮ ಕಾರ್ಲ ಹಿ.ಪ್ರಾ. ಶಾಲಾ ಶಿಕ್ಷಕಿ ಯಶೋಧಾ ದಂಪತಿಯ ದ್ವಿತೀಯ ಪುತ್ರಿ ಯಶಸ್ವಿ, ಕಡೇಶ್ವಾಲ್ಯ ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದು, ಎಸೆಸೆಲ್ಸಿ ಪರೀಕ್ಷೆಯಲ್ಲಿ ೫೭೬ ಅಂಕ ಗಳಿಸಿದ್ದಾಳೆ.
ಶ್ರವಣ ಶಕ್ತಿ ಕೊರತೆ ಇರುವ, ಮಾತನಾಡಲು ಕಷ್ಟಪಡುವ ಈಕೆ ಅದ್ಭುತ ಏಕಾಗ್ರತೆ ಹೊಂದಿದ್ದಾಳೆ. ಹುಟ್ಟಾ ಶ್ರವಣದೋಷವಿದ್ದ ಈಕೆಯನ್ನು ಹೆತ್ತವರು ವಿಶೇಷ ಮುತುವರ್ಜಿ ವಹಿಸಿ ಓದು ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿದ್ದಾರೆ. ಚೆಸ್‌ನಲ್ಲಿ ಈಕೆಗೆ ಇದ್ದ ವಿಶೇಷ ಆಸಕ್ತಿ ಗಮನಿಸಿದ ಹೆತ್ತವರು ಪುತ್ತೂರಿನಲ್ಲಿ ಚೆಸ್ ತರಬೇತಿ ನೀಡುತ್ತಿದ್ದು, ೩ ವರ್ಷಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅದ್ಭುತ ಸಾಧನೆ ಮಾಡಿದ್ದಾಳೆ.

More from the blog

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...

ಇಂದು ಕೇಂದ್ರ ಬಜೆಟ್ ಮಂಡನೆ..

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಇಂದು ಮಂಡಿಸಲಿದ್ದಾರೆ.ಸದನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್‌ ಮಂಡನೆ ಆರಂಭವಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...