ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಜೂ.4 ರಂದು ಕರಾವಳಿಗೆ ಕಾಲಿಟ್ಟ ಮುಂಗಾರು ಮಳೆ ಬಳಿಕ ಕ್ಷೀಣಿಸಿತ್ತು. ಆದರೆ ಕಳೆದೆರಡು ದಿನಗಳಿಂದ ಉತ್ತಮವಾಗಿ ಮಳೆಯಾಗುತ್ತಿದ್ದು, ಗುರುವಾರ ಬೆಳಗ್ಗಿನಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ನಗರದ ತಗ್ಗು ಪ್ರದೇಶದಲ್ಲಿ ಕೆಲವೆಡೆ ನೀರು ನಿಂತಿದೆ. ಜಿಲ್ಲೆಯಲ್ಲಿ ಇಂದಿನಿಂದ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆಯಾಗಿ ವಾಹನ ಸಂಚಾರಕ್ಕೆ ನಿಷೇಧವಿದ್ದ ಕಾರಣ ಮಳೆಯ ಪರಿಣಾಮ ವಾಹನ ದಟ್ಟನೆ ಸಮಸ್ಯೆ ಎದುರಾಗಿಲ್ಲ.
ಕರಾವಳಿ ಭಾಗದಲ್ಲಿ ಜು.16 ರಿಂದ 19 ರವರೆಗೆ ಗಾಳಿ ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.

