Thursday, July 10, 2025

ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯ ಕ್ರೀಡಾ ಸಂಘದ ವತಿಯಿಂದ ಜೂ.21ರಂದು ‘ವಿಶ್ವ ಯೋಗ ದಿನಾಚರಣೆ’ ಜರುಗಿತು.
ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಕ ಮತ್ತು ಯೋಗ ತರಬೇತುದಾರ
ಉದಯಕೃಷ್ಣ ಭಟ್ ಮಾರ್ಗದರ್ಶನದಲ್ಲಿ ಪ್ರಾಯೋಗಿಕ ಯೋಗ ಪ್ರದರ್ಶನ ಏರ್ಪಡಿಸಲಾಗಿತ್ತು. ಹಿರಿಯ ಶಿಕ್ಷಕ ಎಸ್. ರಾಜಗೋಪಾಲ
ಜೋಶಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಪ್ರಸ್ತಾವಿಸಿದರು. ಕ್ರೀಡಾ ಸಂಘದ ಅಧ್ಯಕ್ಷೆ
ಸಹನಕುಮಾರಿ ಮಾತನಾಡಿದರು. ಕ್ರೀಡಾ ಸಂಘದ ಸದಸ್ಯ ಪೃಥ್ವಿರಾಜ್ ಸ್ವಾಗತಿಸಿ, ಉಪಾಧ್ಯಕ್ಷೆ ಆಯಿಷತ್ ಶಾಹಿಲ ವಂದಿಸಿದರು.
ವಿದ್ಯಾರ್ಥಿ ನಾಯಕ ರೂಪೇಶ್, ಮಹಮ್ಮದ್ ಅಜ್ಮಲ್ ಹಾಗೂ ಅಬೂಬಕ್ಕರ್ ಸಿಯಾಬ್ ನೇತೃತ್ವ ವಹಿಸಿದ್ದರು.ಕಾರ್ಯದರ್ಶಿ
ತನುಶ್ರೀ ಪಿ. ಕಾರ್ಯಕ್ರಮ ನಿರೂಪಿಸಿದರು.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...