ಬಂಟ್ವಾಳ: ಶ್ರೀರಾಮ ಪದವಿ ಕಾಲೇಜಿನಲ್ಲಿ ವಿಶ್ವಯೋಗ ದಿನದ ಅಂಗವಾಗಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇದರ ಸಹಯೋಗದೊಂದಿಗೆ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘ ಇದರ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಗಣಪತಿ ಹೆಗಡೆ ಇವರು ಯೋಗದ ಮಹತ್ವದ ಬಗ್ಗೆ ತಿಳಿಸುತ್ತಾ ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಆಗುವ ಧನಾತ್ಮಕ ಪರಿಣಾಮಗಳ ಬಗ್ಗೆ ತಿಳಿಯಪಡಿಸಿದರು.


ವಿದ್ಯಾರ್ಥಿಗಳಲ್ಲಿ ತಾಳ್ಮೆ, ಏಕಾಗ್ರತೆ, ಶಿಸ್ತು, ಸಂಯಮ ಮತ್ತು ಓದಿನಲ್ಲಿ ಯಶಸ್ಸನ್ನು ಸಾಧಿಸಲು ಯೋಗವು ಜೀವನದ ಅವಿಭಾಜ್ಯ ಅಂಗವಾಗಿರಬೇಕು. ಮತ್ತು ದೇಶವನ್ನು ವಿಶ್ವಗುರು ಸ್ಥಾನಕ್ಕೆ ಏರಿಸುವಲ್ಲಿ ಯೋಗದ ಪಾತ್ರವು ಪ್ರಮುಖವಾಗುವುದು ಎಂದರು.
ನಂತರ ಯೋಗದ ವಿವಿಧ ಆಸನಗಳ ಮಾಹಿತಿ ಮತ್ತು ತರಬೇತಿಯನ್ನು ಯೋಗ ತರಬೇತುದಾರರಾದ ಸುಪ್ರಿತಾ ಸಂಜಯ್ ಇವರು ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿಜ್ಯ ವಿಭಾಗ ಉಪನ್ಯಾಸಕರಾದ ರಂಜಿತ್ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅರ್ಥಶಾಸ್ತ್ರ ಉಪನ್ಯಾಸಕ ಹರೀಶ್ ಸ್ವಾಗತಿಸಿ, ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಹರ್ಷಿತಾ ವಂದಿಸಿ, ಇಂಗ್ಲೀಷ್ ಉಪನ್ಯಾಸಕಿ ಲತಾಶ್ರೀ ಕಾರ್ಯಕ್ರಮ ನಿರೂಪಿಸಿದರು.